ಕಣ್ಣೂರು: 26 ವಿದ್ಯಾರ್ಥಿನಿಯರ ಮೇಲೆ ಶಿಕ್ಷಕನೋರ್ವ ಲೈಂಗಿಕ ದೌರ್ಜನ್ಯ ಎಸಗಿದ್ದು, ಶಿಕ್ಷಕನ ವಿರುದ್ಧ ಪೋಕ್ಸೋ ಕಾಯ್ದೆ ಸೇರಿದಂತೆ ಹಲವು ಪ್ರಕರಣಗಳಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಕೇರಳ ಪೊಲೀಸರು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ.
ಜಿಲ್ಲಾ ಚೈಲ್ಡ್ಲೈನ್ ಅಧಿಕಾರಿಗಳ ದೂರುಗಳ ಆಧಾರದ ಮೇಲೆ ಜನವರಿ 12 ಆರೋಪಿಯನ್ನು ಬಂಧಿಸಲಾಗಿದೆ. ವಿದ್ಯಾರ್ಥಿನಿಯೋರ್ವಳು ಶಿಕ್ಷಕನಿಂದ ಎದುರಿಸಿದ ದೌರ್ಜನ್ಯವನ್ನು ಶಾಲಾ ಶಿಕ್ಷಕಿ ಬಳಿ ಹೇಳಿಕೊಂಡ ಬಳಿ ಘಟನೆ ಬೆಳಕಿಗೆ ಬಂದಿದೆ.
ವಿದ್ಯಾರ್ಥಿನಿಯು ತನಗೆ ಶಿಕ್ಷಕ ನೀಡುತ್ತಿರುವ ಲೈಂಗಿಕ ದೌರ್ಜನ್ಯವನ್ನು ಶಿಕ್ಷಕಿಗೆ ತಿಳಿಸಿದ್ದು, ಶಿಕ್ಷಕಿ ಚೈಲ್ಡ್ ಲೈನ್ ಅಧಿಕಾರಿಗಳಿಗೆ ತಕ್ಷಣವೇ ಮಾಹಿತಿ ನೀಡಿದ್ದಾರೆ. ಇದರ ಬೆನ್ನಲ್ಲೇ ಶಿಕ್ಷಕನ ವಿರುದ್ಧ ಕ್ರಮಕೈಗೊಳ್ಳಲಾಗಿದೆ.
ಜನವರಿ 12ರಂದು ಒಟ್ಟು 5 ಪ್ರಕರಣ ದಾಖಲಾಗಿತ್ತು. ಇದೇ ವೇಳೆ ಶಾಲೆಯ ವಿದ್ಯಾರ್ಥಿನಿಯರಿಗೆ ಕೌನ್ಸೆಲಿಂಗ್ ನೀಡಿದ ವೇಳೆ ಮತ್ತೆ 21 ಪ್ರಕರಣಗಳು ಪತ್ತೆಯಾಗಿದ್ದವು. ಇದೀಗ ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


