ಪಾವಗಡ: ಮಟ್ಕಾ ಇಸ್ಪೀಟ್, ಮತ್ತಿತರ ಕಾನೂನು ಬಾಹಿರ ಚಟುವಟಿಕೆ ಸಂಪೂರ್ಣ ಮಟ್ಟ ಹಾಕಲು ಗ್ರಾಮಸ್ಥರು ಪೊಲೀಸ್ ಇಲಾಖೆ ಜೊತೆ ಸಹಕರಿಸುವಂತೆ ಪಾವಗಡ ಪೊಲೀಸ್ ಆರಕ್ಷಕ ನೀರಿಕ್ಷಕರಾದ ಅಜಯ್ ಸಾರಥಿ ಮನವಿ ಮಾಡಿದರು.
ಮಕರ ಸಂಕ್ರಾಂತಿ ಅಂಗವಾಗಿ ಬ್ಯಾಡನೂರು ಗ್ರಾಮಸ್ಥರು ಹಮ್ಮಿಕೊಂಡಿದ್ದ ನಮ್ಮ ಪಾವಗಡ ನಮ್ಮ ಹೆಮ್ಮೆ ಕ್ಯಾಲೆಂಡರ್ ಬಿಡುಗಡೆ ಸರಳ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡಿದರು.
ಮಟ್ಕಾದಿಂದ ಸಾಕಷ್ಟು ಕುಟುಂಬಗಳು ಬೀದಿ ಪಾಲಗಿದ್ದು, ಜನತೆಯ ಸಹಕಾರ ಹಾಗೂ ಪೊಲೀಸ್ ಸಿಬ್ಬಂದಿಯ ಸಹಕಾರದಿಂದ ಈಗಾಗಲೇ ಮಟ್ಕಾವನ್ನು ಸಂಪೂರ್ಣ ಮಟ್ಟ ಹಾಕಲಾಗಿದ್ದು, ಜನತೆ ನೆಮ್ಮದಿಯಿಂದ ಜೀವನ ನಡೆಸುವ ಪ್ರಯತ್ನಕ್ಕೆ ಫಲ ಸಿಕ್ಕಿದಂತಾಗಿದೆ ಎಂದರು.
ಈ ಸಂದರ್ಭದಲ್ಲಿ ಗ್ರಾಮಸ್ಥರು ಪೊಲೀಸ್ ಅಧಿಕಾರಿಗಳನ್ನು ಆತ್ಮೀಯವಾಗಿ ಬರಮಾಡಿಕೊಂಡು ನಮ್ಮ ಪಾವಗಡ ನಮ್ಮ ಹೆಮ್ಮೆ ಎಂಬ ಕೇಕ್ ಕತ್ತರಿಸಿ, ಕ್ಯಾಲೆಂಡರ್ ಬಿಡುಗಡೆ ಮಾಡಿ ಪೊಲೀಸ್ ಅಧಿಕಾರಿಗಳನ್ನು ಆತ್ಮೀಯವಾಗಿ ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷ ಮಾನಂ ಶಶಿಕಿರಣ್, ಗ್ರಾಮದ ಮುಖಂಡರಾದ ವೇಣುಗೋಪಾಲ ರೆಡ್ಡಿ, ಬ್ಯಾಡನೂರು ಶಿವು,ಕುರಬರಹಳ್ಳಿ ಪ್ರಕಾಶ್ ರೆಡ್ಡಿ,ಆಟೋ ಚಾಲಕರ ಸಂಘದ ಅಧ್ಯಕ್ಷ ಬೇಕರಿ ನಾಗರಾಜ್, ನರಸಿಂಹ,ಹಾಗುಆಟೋ ಚಾಲಕರು, ಗ್ರಾಮದ ಯುವಕರು ಮಹಿಳೆಯರು, ವಿದ್ಯಾರ್ಥಿಗಳು ಹಾಜರಿದ್ದರು.
ವರದಿ :- ನಂದೀಶ್ ನಾಯ್ಕ, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy