ಬೆಳಗಾವಿ : 2023-2024 ನೇ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ವತಿಯಿಂದ ಬೆಳಗಾವಿ ಜಿಲ್ಲೆಯಲ್ಲಿ ಮೊರರ್ಜಿ ದೇಸಾಯಿ, ಕಿತ್ತೂರು ರಾಣಿ ಚೆನ್ನಮ್ಮ ಹಾಗೂ ಇತರೆ ವಸತಿ ಶಾಲೆಗಳ 6ನೇ ತರಗತಿಯ ದಾಖಲಾತಿಗಾಗಿ ಮಾರ್ಚ್ 12, 2023 ರಂದು ಬೆಳಗ್ಗೆ 11 ಗಂಟೆಯಿಂದ ಮಧ್ಯಾಹ್ನ 1 ವರೆಗೆ ಪರೀಕ್ಷೆ ನಡೆಯಲಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಪ್ರವೇಶ ಪರೀಕ್ಷೆ ಮತ್ತುಆನ್‍ಲೈನ್ ಕೌನ್ಸಿಲಿಂಗ್ ನಡೆಸಲಾಗುವುದು.
ಪ್ರಸ್ತುತ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಪಾಲಕರು/ಪೋಷಕರು ತಮ್ಮ ಮಕ್ಕಳನ್ನು 6ನೇ ತರಗತಿಗೆ ವಸತಿ ಶಾಲೆಗಳಿಗೆ ದಾಖಲಿಸಲು ಜನವರಿ 5, 2023 ರಿಂದ ಜನವರಿ 22 ರವರೆಗೆ ಅವಶ್ಯಕ ದಾಖಲಾತಿಗಳೊಂದಿಗೆ ತಮ್ಮ ಹತ್ತಿರದ ವಸತಿ ಶಾಲೆಗಳ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


