ನವದೆಹಲಿ: ರಾಜ್ಯದ ಬಜೆಟ್ ಅಧಿವೇಶನದ ನಂತರ ನಾಲ್ಕು ಕಡೆ ರಥಯಾತ್ರೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.
ದೆಹಲಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಂಡ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾರ್ಯಕಾರಿಣಿಯಲ್ಲಿ ಹಲವಾರು ರಾಜಕೀಯ ನಿರ್ಣಯಗಳನ್ನು ತೆಗೆದುಕೊಳ್ಳಲಾಗಿದೆ ಎಂದರು.
ಚುನಾವಣೆ ನಡೆಯುವ ರಾಜ್ಯಗಳ ಬಗ್ಗೆ ವರದಿ ಮಂಡಿಸಲಾಯಿತು. ಬೂತ್ ಮಟ್ಟದ ಕಾರ್ಯಕ್ರಮಗಳಿಂದ ಹಿಡಿದು, ಸಂಘಟನೆ ಕುರಿತು ಮಾಹಿತಿ ನೀಡಲಾಗಿದೆ ಎಂದು ಹೇಳಿದರು.
ರಾಜ್ಯದಲ್ಲಿ ಆಡಳಿತ ವಿರೋಧಿ ಅಲೆ ಇಲ್ಲದೆ ಚುನಾವಣೆ ಎದುರಿಸುತ್ತಿದ್ದೇನೆ. ನಕಾರಾತ್ಮಕ ಪ್ರಚಾರದ ಪ್ರಯತ್ನಗಳು ನಡೆದರು ವಿಪಕ್ಷಗಳು ಪರಿಣಾಮ ಬಿರಿಲ್ಲ. ಬಜೆಟ್ ಅಧಿವೇಶನದ ಬಳಿಕ ನಾಲ್ಕು ಕಡೆಯಿಂದ ರಥಯಾತ್ರೆ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ. ಆದರೆ ನಾಲ್ಕು ದಿಕ್ಕಿನಿಂದ ರಥಯಾತ್ರೆ ಮಾಡಬೇಕು ಎಂದು ನಿರ್ಧರಿಸಿದೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


