ಕಲಬುರಗಿ: ಪ್ರತಿ ಬಿಪಿಎಲ್ ಕುಟುಂಬಗಳಿಗೆ ಮಾಸಿಕ 2000 ರೂ. ನೆರವು ನೀಡಲು ನಿರ್ಧರಿಸಲಾಗಿದ್ದು, ಬರುವ ಬಜೆಟ್ ನಲ್ಲಿ ಈ ಬಗ್ಗೆ ಘೋಷಣೆ ಹೊರಡಿಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ಘೋಷಣೆ ಮಾಡಿದ್ದಾರೆ.
ತಾಲ್ಲೂಕಿನ ಮಾಚನಾಳ ತಾಂಡಾದಲ್ಲಿ ವಾಸ್ತವ್ಯ ಮಾಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ನವರು ತಾವು ಅಧಿಕಾರಕ್ಕೆ ಬಂದರೆ ಮಾಸಿಕ 2000 ರೂ. ನೀಡುವುದಾಗಿ ಹೇಳಿದ್ದಾರೆ. ಅದು ಜುಲೈನಿಂದ ಅನ್ವಯವಾಗಲಿದೆ.
ಆದರೆ ಅವರು ಅಧಿಕಾರಕ್ಕೇ ಬರುವುದಿಲ್ಲ. ಆದರೆ ನಾವು ತಕ್ಷಣವೇ ಶುರು ಮಾಡಲಿದ್ದೇವೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹೆಚ್ಚಿನ ಮಾಹಿತಿ ನೀಡಲಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


