ಬಾಗಲಕೋಟೆ: ಕೌಟುಂಬಿಕ ಸಮಸ್ಯೆಯಿಂದ ಬೇಸತ್ತು ಮಲಪ್ರಭಾ ನದಿಗೆ ಹಾರಿ ಇಬ್ಬರು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿರುವುದು ಜಿಲ್ಲೆಯ ಹುನಗುಂದ ತಾಲೂಕಿನ ಕಮತಗಿಯಲ್ಲಿ ನಡೆದಿದೆ.
ಸೂಳೇಭಾವಿ ಗ್ರಾಮದ ನಿವಾಸಿ ಉಮಾ ಮಾಸರೆಡ್ಡಿ (45), ಸೌಂದರ್ಯ (18) ಹಾಗೂ ಐಶ್ವರ್ಯ (20) ಮೃತ ದುರ್ದೈವಿಗಳು.
ಐಶ್ವರ್ಯ ಬೆಂಗಳೂರಿನಲ್ಲಿ ಬಿಇ ಸಿವಿಲ್ ಎಂಜಿನಿಯರಿಂಗ್ ಓದುತ್ತಿದ್ದರು. ಸೌಂದರ್ಯ ಬಾಗಲಕೋಟೆಯಲ್ಲಿ ಬಿಎಸ್ಸಿ ವಿದ್ಯಾಭ್ಯಾಸ ಮಾಡುತ್ತಿದ್ದರು. ಕೌಟುಂಬಿಕ ಸಮಸ್ಯೆಯಿಂದ ಡೆತ್ ನೋಟ್ ಬರೆದಿಟ್ಟು ಮಕ್ಕಳೊಂದಿಗೆ ತಾಯಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಕಮತಗಿ ಪಟ್ಟಣದ ರಾಮಥಾಳ ಗ್ರಾಮದ ಮಲಪ್ರಭಾ ಸೇತುವೆಯಿಂದ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅಗ್ನಿಶಾಮಕ ದಳ ಸಿಬ್ಬಂದಿ ಶೋಧ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಹೊರಕ್ಕೆ ತೆಗೆದಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


