nammatumakuru

    Subscribe to Updates

    Get the latest creative news from FooBar about art, design and business.

    What's Hot

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026
    Facebook Twitter Instagram
    ಟ್ರೆಂಡಿಂಗ್
    • ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ
    • ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು
    • ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ
    • ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ
    • ಪಂಚ ಗ್ಯಾರೆಂಟಿ, ‘ಲಂಚ ಗ್ಯಾರೆಂಟಿ’: ಸತೀಶ್ ಜಾರಕಿಹೊಳಿ ಹೇಳಿಕೆಯಲ್ಲೇ ಭ್ರಷ್ಟಾಚಾರಕ್ಕೆ ಸಾಕ್ಷಿ: ಬಿ.ವೈ.ವಿಜಯೇಂದ್ರ ವಾಗ್ದಾಳಿ
    • ವಿಕಲಚೇತನರಿಗೆ ರಾಜಕೀಯ ಮೀಸಲಾತಿಗೆ ಒತ್ತಾಯಿಸಿ ಪ್ರತಿಭಟನೆ: ಫೆ.22ರಂದು ತುಮಕೂರಿನಲ್ಲಿ ರ‍್ಯಾಲಿ
    • ಹತ್ತೇನಹಳ್ಳಿ ಮಾರಮ್ಮನಿಗೆ ಹೊಸ ತಾಳಿ ಸಮರ್ಪಣೆ: ಭಕ್ತರಿಗೆ ಸಂಭ್ರಮ
    • ಸಾರ್ವಜನಿಕರ ರಸ್ತೆಗೆ ಕಾಂಪೌಂಡ್ ನಿರ್ಮಾಣ: ತೆರವಿಗೆ ಆಗ್ರಹಿಸಿ ತಹಶೀಲ್ದಾರ್‌ ಗೆ ಮನವಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಶ್ರೀಕೃಷ್ಣದೇವರಾಯ ದೇಶದ ಎಲ್ಲಾ ಹಿಂದೂ ಸಮಾಜಕ್ಕೆ ಆದರ್ಶಪ್ರಾಯ: ಎನ್.ಪದ್ಮನಾಭ
    ಕೊರಟಗೆರೆ January 18, 2023

    ಶ್ರೀಕೃಷ್ಣದೇವರಾಯ ದೇಶದ ಎಲ್ಲಾ ಹಿಂದೂ ಸಮಾಜಕ್ಕೆ ಆದರ್ಶಪ್ರಾಯ: ಎನ್.ಪದ್ಮನಾಭ

    By adminJanuary 18, 2023No Comments2 Mins Read
    koratagere

    ಕೊರಟಗೆರೆ : ವಿಜಯನಗರ ಸಾಮ್ರಾಜ್ಯದ ಶ್ರೇಷ್ಠ ಅರಸ ಶ್ರೀ ಕೃಷ್ಣದೇವರಾಯರ ಆದರ್ಶ ಮತ್ತು ವ್ಯಕ್ತಿತ್ವ ಕೇವಲ ಬಲಿಜ ಸಮುದಾಯಕ್ಕೆ ಸೀಮಿತವಲ್ಲ ದೇಶದ ಎಲ್ಲಾ ಹಿಂದೂ ಸಮಾಜಕ್ಕೆ ಆದರ್ಶಪ್ರಾಯ ಎಂದು ಕೊರಟಗೆರೆ ತಾಲೂಕು ಬಲಿಜ ಸಂಘದ ಆಧ್ಯಕ್ಷ ಎನ್,ಪದ್ಮನಾಭ್ ತಿಳಿಸಿದರು.

    ಅವರು ಕೊರಟಗೆರೆ ಪಟ್ಟಣದ ಕಾಮಧೇನು ಹೋಟೆಲ್ ಸಭಾಂಗಣದಲ್ಲಿ ತಾಲೂಕು ಬಲಿಜ ಸಂಘ, ಮಹಿಳಾ ಬಜಿಜ ಸಂಘ ಹಾಗೂ ಯುವ ಬಜಿಜ ಸಂಘ ಏರ್ಪಡಿಸಿದ್ದ ಶ್ರೀ ಕೃಷ್ಣದೇವರಾಯರ 552ನೇ ಜಯಂತಿ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಪ್ಪನಮನ ಸಲ್ಲಿಸಿ ಮಾತನಾಡಿ ಕರ್ನಾಟಕ ಸಮೃದ್ದ ಇತಿಹಾಸದಲ್ಲಿ ತನ್ನದೇ ಛಾಪನ್ನು ಮೂಡಿಸಿದ ವಿಜಯನಗರ ಸಾಮ್ರಾಜ್ಯದ ಅರಸ ಕನ್ನಡ ರಾಜ್ಯರತ್ನ ಸಿಂಹಾಸನಾಧೀಶ್ವರ ಶ್ರೀ ಕೃಷ್ಣದೇವರಾಯರೊಬ್ಬರು ದೂರದೃಷ್ಠಿಯ ಮಹಾನ್ ವ್ಯಕ್ತಿಯಾಗಿದ್ದಲ್ಲದೇ ಹಿಂದೂ ಧರ್ಮದ ಪರಮ ಸಹಿಷ್ಣುವಾಗಿದ್ದರು, ಅವರು ಕೇವಲ ವಿಜಯನಗರ ಸಾಮ್ರಾಜ್ಯದ ಶ್ರೇಷ್ಠ ಚಕ್ರವರ್ತಿಯಲ್ಲದೇ ಈ ಜಗತ್ತು ಕಂಡ ಮಹಾನ್ ಚಕ್ರವರ್ತಿಗಳಲ್ಲಿ ಒಬ್ಬರಾಗಿದ್ದರು.


    Provided by
    Provided by

    ಇಂತಹ ಮಹಾನ್ ವ್ಯಕ್ತಿ ನಮ್ಮ ಬಲಿಜ ಸಮುದಾಯದ ವ್ಯಕ್ತಿಯಾಗಿರುವುದು ಬಲಿಜ ಕುಲಕ್ಕೆ ಕಳಸ ಪ್ರಾಯ ಎಂದು ತಿಳಿಸಿದರು.ತಾಲೂಕು ಬಲಿಜ ಸಂಘದ ಪತ್ರಿಕಾ ಕಾರ್ಯದರ್ಶಿ ಹಾಗೂ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ಕೆ.ವಿ.ಪುರುಷೋತ್ತಮ್ ಮಾತನಾಡಿ ಶ್ರೀ ಕೃಷ್ಣದೇವರಾಯರು ತಮ್ಮ ಆಗಾಧವಾದ ಶಕ್ತಿ ಸಾಮರ್ಥದೊಂದಿಗೆ ಬಹುಮುಖ ಪ್ರತಿಭೆ ಸಮರ್ಥ ಆಡಳಿತಗಾರ ಮತ್ತು ಕಲೆ ಮತ್ತು ಸಾಹಿತ್ಯದ ಉದಾರವಾದಿ ಪೋಷಕರಾಗಿ ದಕ್ಷಿಣ ಭಾರತದಲ್ಲಿ ತಮ್ಮದೇ ಆದ ವಿಶಿಷ್ಟ ರೀತಿಯ ಛಾಪು ಮೂಡಿಸಿದಾರೆ, ಕರ್ನಾಟಕದ ವಿಜಯನಗರದ ರಾಜನಾಗಿದ್ದರೂ ಆಂದ್ರಪ್ರದೇಶದ ನೈಋತ್ಯ ಭಾಗದಲ್ಲಿರುವ ಐದು ಜಿಲ್ಲೆಗಳಲ್ಲಿ ಸಾಮ್ರಾಜ್ಯ ಸ್ಥಾಪಿಸಿದ್ದು ಇಂದಿಗೂ ರಾಯಲಸೀಮಾ ಭಾಗವನ್ನು ಶ್ರೀಕೃಷ್ಠದೇವರಾಯನ ಭೂಮಿ ಎಂದೇ ಕರೆಯಲಾಗುತ್ತದೆ.

    ಕೃಷ್ಣದೇವರಾಯರು ಹಿಂದೂ ಧರ್ಮದ ಅಭಿವೃದ್ದಿಗೆ ಶ್ರಮಿಸಿದ್ದ ಮಾಹಾನ್ ವ್ಯಕ್ತಿಯಾಗಿದ್ದು ಇದರ ಕುರುಹಾಗಿ ಹಜಾರರಾಮ ದೇವಸ್ಥಾನ ಅಲ್ಲದೇ ಹಂಪೆಯ ವಿಠಲಸ್ವಾಮಿಯ ದೇವಸ್ಥಾನ ನಿರ್ಮಾಣದ ಸಂಪೂರ್ಣ ಶ್ರೇಯಸ್ಸು ಇವರಿಗೆ ಸಲ್ಲುತ್ತದೆ.

    ಪಾಳು ಬಿದ್ದ ಹಿಂದೂ ದೇವಾಲಯಗಳ ಜೀರ್ಣೋದ್ದಾರ ಮಾಡಿಸಿದ್ದಲ್ಲದೇ ಲಕ್ಷಾಂತರ ದೇವಾಲಯಗಳಲ್ಲಿ ನಿತ್ಯ ಪೂಜೆ ಪುನಸ್ಕಾರಗಳು ಯಥಾವತ್ತಾಗಿ ನಡೆಯುವಂತೆ ಧಾರ್ಮಿಕ ದತ್ತಿ ಮತ್ತು ಉಂಬಳಿಗಳನ್ನು ನೀಡಿದ್ದಾರೆ, ದೇಶದಲ್ಲೇ ಪ್ರಸಿದ್ದಯಾಗಿರುವ ತಿರುಪತಿ ತಿರುಮಲ ದೇವಾಲಯದ ಅಭಿವೃಧ್ದಿ ಶ್ರೀಕೃಷ್ಣದೇವರಾಯರಿಗೆ ಸಲ್ಲುತ್ತದೆ ಎಂದು ತಿಳಿಸಿದರು.

    ತಾಲೂಕು ಮಹಿಳಾ ಬಲಿಜ ಸಂಘದ ಅಧ್ಯಕ್ಷೆ ಗೀರಿಜಾಕೃಷ್ಣಪ್ಪ ಮಾತನಾಡಿ ದಕ್ಷಿಣ ಭಾರತದಲ್ಲಿ ಹಿಂದೂ ಸಾಮ್ರಾಜ್ಯದವನ್ನು ಸ್ಥಾಪಿಸಿ ಸುಮಾರು 330 ವರ್ಷಗಳ ಕಾಲ ಅತ್ಯಂತ ವೈಭವೋಪೇತವಾಗಿ ಆಳ್ವಿಕೆ ನಡೆಸಿದ ವಿಜಯನಗರ ಸಾಮ್ರಾಜ್ಯದ ಅರಸಾಗಿದ್ದ ಕೃಷ್ಣದೇವರಾಯರು ತಮ್ಮ ಅವದಿಯಲ್ಲಿ ದುಸ್ತಿತಿಯಲ್ಲಿದ್ದ ರಾಜಕೀಯ ಆಡಳಿತವನ್ನು ಉತ್ತಮಮಟ್ಟಕ್ಕೆ ತಂದ ಅವರು ಇಂದಿನ ಸರ್ಕಾರಕ್ಕೂ ಆದರ್ಶವಾಗಿದ್ದಾರೆ ಎಂದು ತಿಳಿಸಿದರು.

    ಬಲಿಜ ಮಹಿಳಾ ಸಂಘದ ಮಂಜುಳಾ ಮಯೂರ ಗೋವಿಂದರಾಜು ಮಾತನಾಡಿ 1471 ವಕೃತಿ ನಾಮ ಸಂವತ್ಸರ ಪುಪ್ಯಮಾಸ ಬಹುದ್ವಾದಶಿ ಶುಕ್ರವಾರ ಜ್ಯೇಷ್ಠ ನಕ್ಷತ್ರದಲ್ಲಿ ಜನಿಸಿದ ನಮ್ಮ ಬಲಿಜ ಸಮುದಾಯದ ಕುಲತಿಲಕ ಶ್ರೀಕೃಷ್ಣದೇವರಾಯರ ಸಾಮ್ರಾಜ್ಯದಲ್ಲಿ ರಸ್ತೆಯಲ್ಲಿ ಮುತ್ತು ರತ್ನ ವ್ಯಾಪಾರ ಮಾಡುವ ಮೂಲಕ ಭವ್ಯ ಭಾರತ ಸರ್ಕಾರಕ್ಕೆ ಆಡಳಿತದಲ್ಲಿ ಆದರ್ಶವಾಗಿದ್ದಾರೆ ಇಂತಹ ಬಲಿಜ ಸಮುದಾಯಕ್ಕೆ ಅನ್ಯಾಯಮಾಡುತ್ತಿರುವುದು ಶೊಚನೀಯ ಎಂದು ತಿಳಿಸಿದರು.

    ಕಾರ್ಯಕ್ರಮದಲ್ಲಿ ಬಲಿಜ ಕುಲಗುರು ಕೈವಾರ ಯೋಗಿನಾರಾಯಣ. ಬಲಿಜ ಸಮುದಾಯದಲ್ಲಿ ಹುಟ್ಟ ಸಮಾಜ ಸೇವೆಯಮೂಲಕ ಆದರ್ಶ ಪ್ರಾಯರಾದ ಅಕ್ಷರ ದೇವತೆ ಸಾವಿತ್ರಿ ಬಾಯಿಪುಲ್ಲೆ ಹಾಗೂ ಪೇರಿಯಾರ್ ರಾಮಸ್ವಾಮಿ ರವರ ಬಾವಚಿತ್ರಕ್ಕೂ ಪುಪ್ಪನಮನ ಸಲ್ಲಿಸಿದರು.

    ಈ ಸಂದರ್ಭದಲ್ಲಿ ತಾಲೂಕು ಸಂಘದ ಉಪಾಧ್ಯಕ್ಷ ವೆಂಕಟೇಗೌಡ, ಕಾರ್ಯದಶಿ ನವೀನ್ ಕುಮಾರ್, ಖಜಾಂಚಿ ವೆಂಕಟೇಶ್, ಯುವ ಬಲಿಜ ಅಧ್ಯಕ್ಷ ಸಂಜಯ್, ಪಧಾದಿಕಾರಿಗಳಾದ ಕೆ.ವಿ.ಶ್ರೀನಿವಾಸ್,ಪ್ರೇಂಡ್ಸ್ ಗ್ರೂಪ್ ರವಿಕುಮಾರ್,ಕೆ.ಬಿ.ಲೋಕೇಶ್, ಬೆನಕಾ ವೆಂಕಟೇಶ್,ಕೊಡ್ಲಹಳ್ಳಿ ಜಗದೀಶ್,ವೆಂಕಟಾಚಲಿ, ಶಿವಕುಮಾರ್,ರೋಹಿತ್, ಕೇಶವಮೂರ್ತಿ,ಜಯರಾಮ್, ಆರ್.ಜಿ.ಎಸ್.ಅನಿಲ್ಕುಮಾರ್, ದಯಾನಂದ್, ನಯನ್, ರಮೇಶ್ಬಾಬು ಮಹಿಳಾ ಸಂಘದ ಮಂಜುಳಾ ಮಯೂರ ಗೋವಿಂದರಾಜು,ಗೀತಾ,ಸುಚಿತ್ರ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

    ಕೊರಟಗೆರೆ ಪಟ್ಟಣದ ಕಾಮಧೇನು ಹೋಟೆಲ್ ಸಭಾಂಗಣದಲ್ಲಿ ತಾಲೂಕು ಬಲಿಜ ಸಂಘ ಏರ್ಪಡಿಸಿದ್ದ ಶ್ರೀಕೃಷ್ಣದೇವರಾಯ ಜಯಂತಿ ಕಾರ್ಯಕ್ರಮದಲ್ಲಿ ಸಂಘದ ಪದಾಧಿಕಾರಿಗಳು ಇದ್ದರು.

    ವರದಿ: ಮಂಜುಸ್ವಾಮಿ.ಎಂ.ಎನ್., ಕೊರಟಗೆರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಕೊರಟಗೆರೆ ಪೊಲೀಸರಿಂದ ಭರ್ಜರಿ ಬೇಟೆ: ಅಂತಾರಾಜ್ಯ ಮೊಬೈಲ್ ಪೋನ್ ಕಳ್ಳರ ಬಂಧನ

    February 20, 2026

    ಎಸ್ ಎಸ್ ಎಲ್ ಸಿ ಪರೀಕ್ಷೆ : ವಿದ್ಯಾರ್ಥಿಗಳೊಂದಿಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಸಂವಾದ

    February 19, 2026

    ಶ್ರೀ ಸಂತ ಸೇವಾಲಾಲ್ ರವರ ಆದರ್ಶ ತತ್ವ ಪಾಲಿಸಿ: ತಹಶೀಲ್ದಾರ್ ಕೆ.ಮಂಜುನಾಥ್

    February 19, 2026

    Comments are closed.

    Our Picks

    ಇಂಡಿಯಾ ಎಐ ಇಂಪ್ಯಾಕ್ಟ್ ಎಕ್ಸ್‌ಪೋ 2026: ಆಲೋಚನೆ ಮತ್ತು ನಾವೀನ್ಯತೆಗಳ ಪ್ರಬಲ ಸಂಗಮ ಎಂದ ಪ್ರಧಾನಿ ಮೋದಿ

    February 17, 2026

    ಬಿಹಾರದಲ್ಲಿ ತುಮಕೂರು ಮೂಲದ ಒಂದೇ ಕುಟುಂಬದ ನಾಲ್ವರ ನಿಗೂಢ ಸಾವು: ಪ್ರವಾಸಕ್ಕೆ ಹೋದವರು ಹೆಣವಾಗಿ ಮರಳಿದರು!

    February 7, 2026

    ಬೆಂಗಳೂರು–ಹೈದರಾಬಾದ್ ಹೈಸ್ಪೀಡ್ ರೈಲು ಬೀದರ್ ವರೆಗೆ ವಿಸ್ತರಿಸಿ: ರೈಲ್ವೆ ಸಚಿವರಿಗೆ ದೇವೇಗೌಡರ ಮನವಿ

    February 6, 2026

    ಜೀವನದಲ್ಲಿ ಕೊನೆಯ ಹಂತದಲ್ಲಿದ್ದೇನೆ, ನೀರಾವರಿ ಯೋಜನೆಗಳಿಗೆ ಅನುಮೋದನೆ ಕೊಡಿ: ಹೆಚ್.ಡಿ. ದೇವೇಗೌಡ ಗದ್ಗದಿತ

    February 5, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಮಧುಗಿರಿ

    ಮಧುಗಿರಿ: ಬಸ್ ನಿಲ್ದಾಣಗಳಲ್ಲಿ ತಂಗುದಾಣಗಳ ಕೊರತೆ; ಪ್ರಯಾಣಿಕರ ಪರದಾಟ

    February 21, 2026

    ಮಧುಗಿರಿ: ತುಮಕೂರು ಜಿಲ್ಲೆಯ ಮಧುಗಿರಿ ಪಟ್ಟಣದ ಪ್ರಮುಖ ವೃತ್ತಗಳಲ್ಲಿ ಬಸ್‌ ಗಳಿಗಾಗಿ ಕಾಯುವ ಪ್ರಯಾಣಿಕರಿಗೆ ಸೂಕ್ತ ತಂಗುದಾಣಗಳಿಲ್ಲದೆ ತೀವ್ರ ತೊಂದರೆಯಾಗುತ್ತಿದೆ.…

    ಮಧುಗಿರಿ: ಪಡಿತರ ತರಲು ತೆರಳುತ್ತಿದ್ದ ವೇಳೆ ಕಾರು ಡಿಕ್ಕಿಯಾಗಿ ಮಹಿಳೆ ಸಾವು

    February 21, 2026

    ಶೇ.99ರಷ್ಟು ಕಠಿಣ ಪರಿಶ್ರಮದಿಂದ ಸಾಧನೆ ಕಟ್ಟಿಟ್ಟ ಬುತ್ತಿ: ನ್ಯಾ.ರಾಜೇಶ್ ಎನ್.ಹೊಸಮನೆ ಅಭಿಮತ

    February 21, 2026

    ಔರಾದ್: ಸಂತಪುರ ಗುರುಕುಲ ಶಾಲೆಯಲ್ಲಿ ರಾಷ್ಟ್ರೀಯ ಬಾಯಿ ಹಲ್ಲು ತಪಾಸಣೆ ಶಿಬಿರ

    February 21, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.