ಚಿಕ್ಕಮಗಳೂರು: ದಲಿತರು ಹಾಗೂ ಅಲ್ಪಸಂಖ್ಯಾತರನ್ನು ದೂರವಿಟ್ಟು ಜಿಲ್ಲಾ ಉತ್ಸವ ನಡೆಸಲಾಗುತ್ತಿದೆ ಎಂದು ಆರೋಪಿಸಿ ಮುಖ್ಯಮಂತ್ರಿಗಳ ಬಳಿಗೆ ತೆರಳಿ ಮನವಿ ಸಲ್ಲಿಸಲು ಯತ್ನಸಿದ ದಲಿತ ಸಂಘಟನೆಗಳ ಮುಖಂಡರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ಜಿಲ್ಲಾ ಉತ್ಸವದ ಯಾವುದೇ ಸಮಿತಿಗಳಲ್ಲಿ ದಲಿತರು ಮತ್ತು ಅಲ್ಪಸಂಖ್ಯಾತ ಸಮುದಾಯಗಳ ವ್ಯಕ್ತಿಗಳನ್ನು ಸೇರಿಸಿಕೊಂಡಿಲ್ಲ, ದಲಿತ ಕಲಾ ಮಂಡಳಿಗಳಿಗೆ ಅವಕಾಶ ನೀಡದೇ ತಾರತಮ್ಯ ಮಾಡಲಾಗಿದೆ ಎಂದು ಜಿಲ್ಲಾಡಳಿತದ ವಿರುದ್ಧ ದಲಿತ ಪ್ರಗತಿಪರ ಸಂಘಟನೆಯ ಮುಖಂಡರು ಆರೋಪಿಸಿದರು.
ಕಾರ್ಯಕ್ರಮಕ್ಕೆ ಭಾಗವಹಿಸಲು ಮುಖ್ಯಮಂತ್ರಿಗಳು ಬಂದಾಗ ಜಿಲ್ಲಾಡಳಿತದ ವಿರುದ್ಧ ದೂರು ಸಲ್ಲಿಸಲು ಮುಂದಾದಾಗ ದಲಿತ ಸಂಘಟನೆಗಳ ಮುಖಂಡರುಗಳಾದ ಶ್ರೀನಿವಾಸ್ ಅಣ್ಣಯ್ಯ, ಹೊನ್ನೇಶ್, ಯಲಗುಡಿಗೆ ಹೊನ್ನಪ್ಪ, ರಮೇಶ್, ಅಂಗಡಿ ಚಂದ್ರು, ಜಗದೀಶ್, ಹುಣಸೇಮಕ್ಕಿ ಲಕ್ಷ್ಮಣ್ ಇತರರನ್ನು ಪೊಲೀಸರು ವಶಕ್ಕೆ ತೆಗೆದುಕೊಂಡರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


