nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026
    Facebook Twitter Instagram
    ಟ್ರೆಂಡಿಂಗ್
    • ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ
    • ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ
    • 4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?
    • ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ
    • ಬೆಂಗಳೂರು: ಆರ್ಟ್ ಆಫ್ ಲಿವಿಂಗ್‌ನಲ್ಲಿ ನೂತನ ‘ಧ್ಯಾನ ಮಂದಿರ’ ಉದ್ಘಾಟಿಸಿದ ಪ್ರಧಾನಿ ಮೋದಿ
    • ತಾಯಂದಿರ ದಿನದ ವಿಶೇಷ ‘ಅಮ್ಮ’ | ವಿ.ಎಂ.ಎಸ್.ಗೋಪಿ
    • ಮೇ 11ರಂದು ಕೃತಕ ಬುದ್ಧಿಮತ್ತೆ: ಒಂದು ದಿನದ ರಾಷ್ಟ್ರೀಯ ಸಮ್ಮೇಳನ
    • ತುಮಕೂರು: ಕುರುಬರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ತಂದೆಯ ವಯಸ್ಸಿನ ವ್ಯಕ್ತಿಯಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ : ಕೆ. ನಾಗಣ್ಣಗೌಡ
    ಜಿಲ್ಲಾ ಸುದ್ದಿ January 19, 2023

    ತಂದೆಯ ವಯಸ್ಸಿನ ವ್ಯಕ್ತಿಯಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ : ಕೆ. ನಾಗಣ್ಣಗೌಡ

    By adminJanuary 19, 2023No Comments2 Mins Read
    lyngika dowrjanya

    ಬೆಳಗಾವಿ : ಲೈಂಗಿಕ ದೌರ್ಜನ್ಯ, ಅಪೌಷ್ಟಿಕತೆ, ಬಾಲ್ಯವಿವಾಹ, ಬಾಲಕಾರ್ಮಿಕ ಪದ್ಧತಿ, ಭಿಕ್ಷಾಟನೆ ಸೇರಿದಂತೆ ವಿವಿಧ ಬಗೆಯಲ್ಲಿ ಕಾನೂನು ಸಂಘರ್ಷಕ್ಕೊಳಗಾದ ಮಕ್ಕಳನ್ನು ಗುರುತಿಸಿ ಅವರನ್ನು ಮುಖ್ಯವಾಹಿನಿಗೆ ಕರೆತರಲು ಎಲ್ಲ ಅಧಿಕಾರಿಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

    ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಬುಧವಾರ(ಜ.18) ನಡೆದ ಬಾಲನ್ಯಾಯಾಲಯ ಕಾಯ್ದೆ, ಆರ್.ಟಿ.ಇ. ಕಾಯ್ದೆ, ಲೈಂಗಿಕ ದೌರ್ಜನ್ಯದಿಂದ ಮಕ್ಕಳ ಸಂರಕ್ಷಣಾ ಕಾಯ್ದೆ(ಪೋಕ್ಸೊ) ಅನುಷ್ಠಾನ ಕುರಿತು ಜಿಲ್ಲೆಯ ಎಲ್ಲ ಭಾಗೀದಾರರೊಂದಿಗೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.


    Provided by
    Provided by

    ಕೆಲವು ಶಾಲೆಗಳಲ್ಲಿ ಶಿಕ್ಷಕರಿಂದ ಲೈಂಗಿಕ ದೌರ್ಜನ್ಯ ಎಸಗುತ್ತಿರುವ ಪ್ರಕರಣಗಳು ವರದಿಯಾಗುತ್ತಿವೆ. ತಂದೆಯ ವಯಸ್ಸಿನ ವ್ಯಕ್ತಿಯಿಂದ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ನಡೆಯುತ್ತಿರುವುದು ಖೇದಕರ. ಇಂತಹ ಸನ್ನಿವೇಶದಲ್ಲಿ ಮಕ್ಕಳ ಹಕ್ಕುಗಳ ರಕ್ಷಣೆಯ ಹೊಣೆ ನಮ್ಮೆಲ್ಲರ ಮೇಲಿದೆ.

    ಶಾಲೆಬಿಟ್ಟ ಮಕ್ಕಳನ್ನು ಶಾಲೆಗೆ ಸೇರಿಸುವರೆಗೆ ಸಂಬಂಧಿಸಿದ ಅಧಿಕಾರಿಗಳು ಗಮನಹರಿಸಬೇಕು. ಶಾಲಾಮಕ್ಕಳಲ್ಲಿ ಲೈಂಗಿಕ ದೌರ್ಜನ್ಯ ಕಂಡುಬಂದ ತಕ್ಷಣವೇ ಸೂಕ್ತ ಕಾನೂನು ಕ್ತಮ ತೆಗೆದುಕೊಳ್ಳಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ತಿಳಿಸಿದರು.

    ಬಿಸಿಯೂಟ ತಯಾರಿಕೆ ಸಂದರ್ಭದಲ್ಲಿ ಸ್ವಚ್ಛತೆ ಹಾಗೂ ಗುಣಮಟ್ಟ ಗಮನಹರಿಸಬೇಕು. ಈ ಕುರಿತು ನಿರಂತರ ಸಭೆ ನಡೆಸಬೇಕು ಎಂದು ಹೇಳಿದರು.ಮಕ್ಕಳಿಗೆ ಪೌಷ್ಟಿಕಾಹಾರ ಮಹತ್ವದ ಬಗ್ಗೆ ಪ್ರಾಯೋಗಿಕವಾಗಿ ತಿಳಿಸಿಕೊಡಬೇಕು.

    ಆಸ್ಪತ್ರೆಯಲ್ಲಿ ವಾರಸುದಾರರಿಲ್ಲದ ನವಜಾತ ಶಿಶುಗಳು ದೊರೆತಾಗ ಕೂಡಲೇ ನಿಯಮಾವಳಿ ಪ್ರಕಾರ ದತ್ತುಕೇಂದ್ರಗಳಿಗೆ ಮಾಹಿತಿಯನ್ನು ನೀಡಬೇಕು ಎಂದು ನಿರ್ದೇಶನ ನೀಡಿದರು.

    1098 ಅಥವಾ 112 ಸಹಾಯವಾಣಿ ಮಾಹಿತಿ ನೀಡಲು ಸೂಚನೆ:

    ಬಾಲ್ಯವಿವಾಹ, ಲೈಂಗಿಕ ದೌರ್ಜನ್ಯ ಸೇರಿದಂತೆ ಜಿಲ್ಲೆಯಲ್ಲಿ ಮಕ್ಕಳಿಗೆ ಯಾವುದೇ ರೀತಿಯ ಸಮಸ್ಯೆಯಾದಾಗ 1098 ಅಥವಾ 112 ಗೆ ತಕ್ಷಣ ತಿಳಿಸಬೇಕು ಎಂದು ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಅಧ್ಯಕ್ಷ ಕೆ.ನಾಗಣ್ಣಗೌಡ ಹೇಳಿದರು.

    ಬಾಲಕಿಯರ ವಸತಿಶಾಲೆಗಳಲ್ಲಿ ಯಾವುದೇ ಕಾರಣಕ್ಕೂ ಪುರುಷ ವಾರ್ಡನ್ ಇರಕೂಡದು. ಒಂದು ವೇಳೆ ಇದ್ದರೆ ಬದಲಾಯಿಸಬೇಕು ಎಂದರು.

    ವಸತಿನಿಲಯದ ಮಕ್ಕಳಿಗೆ ಗುಣಮಟ್ಟದ ಆಹಾರ ಒದಗಿಸುವುದರ ಜತೆಗೆ ಓದಿಗೆ ಪೂರಕವಾದ ವಾತಾವರಣ ಕಲ್ಪಿಸಬೇಕು. ವಲಸೆ ಕಾರ್ಮಿಕರ ಮಕ್ಕಳಿಗೆ ಶಿಕ್ಷಣ ಹಾಗೂ ಆರೋಗ್ಯ ಸೌಲಭ್ಯ ಒದಗಿಸಬೇಕು.

    ಬಾಲಕಾರ್ಮಿಕರು, ಭಿಕ್ಷಾಟನೆಯಲ್ಲಿ ತೊಡಗಿರುವ ಮಕ್ಕಳನ್ನು ಗುರುತಿಸಿ ಅವರಿಗೆ ಕೌನ್ಸಿಲಿಂಗ್ ಮೂಲಕ ಮನಃ ಪರಿವರ್ತಿಸಿ ಸರಕಾರಿ ಸೌಲಭ್ಯಗಳನ್ನು ಒದಗಿಸುವ ಕೆಲಸವನ್ನು ಸಮಾಜ ಕಲ್ಯಾಣ ಹಾಗೂ ಕಾರ್ಮಿಕ ಇಲಾಖೆಯ ಅಧಿಕಾರಿಗಳು ಪ್ರಯತ್ನಿಸಬೇಕು ಎಂದು ತಿಳಿಸಿದರು.

    ಬಾಲ್ಯವಿವಾಹ ತಡೆಗೆ ಕಟ್ಟುನಿಟ್ಟಿನ ಸೂಚನೆ:

    ಬಾಲ್ಯವಿವಾಹ ತಡೆಗೆ ರಚಿಸಲಾಗಿರುವ ಸಮಿತಿಯ ಸದಸ್ಯರು ತಮ್ಮ ಜವಾಬ್ದಾರಿ ಅರಿತುಕೊಂಡು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಬೇಕು. ಇದರಲ್ಲಿ ವಿಫಲವಾಗುವ ಅಧಿಕಾರಿಗಳನ್ನು ಹೊಣೆ ಮಾಡಲಾಗುವುದು ಎಂದು ಆಯೋಗದ ಅಧ್ಯಕ್ಷರಾದ ಕೆ.ನಾಗಣ್ಣಗೌಡ ಎಚ್ಚರಿಕೆ ನೀಡಿದರು.

    ಇದು ಅಧಿಕಾರಯುತ ಸಮಿತಿಯಾಗಿದ್ದು, ಸಮಿತಿಯ ಎಲ್ಲರೂ ಸೇರಿ ಕೆಲಸ ಮಾಡಿದರೆ ಬಾಲ್ಯವಿವಾಹ ತಡೆಗಟ್ಟಲು ಸಾಧ್ಯ. ಎಂತಹ ಒತ್ತಡವನ್ನೂ ಎದುರಿಸಿ ಕಾನೂನು ಕ್ರಮ ತೆಗೆದುಕೊಳ್ಳಬಹುದು ಎಂದರು.

    ಕೌಟುಂಬಿಕ ದೌರ್ಜನ್ಯ ಸಂದರ್ಭದಲ್ಲಿ ವ್ಯತಿರಿಕ್ತವಾಗಿ ಪರಿಣಾಮ ಎದುರಿಸುವ ಮಕ್ಕಳ ಹಿತರಕ್ಷಣೆಗೆ ಆದ್ಯತೆ ನೀಡಬೇಕು.ಮಕ್ಕಳ ಹಕ್ಕುಗಳ ರಕ್ಷಣೆಯು ಸಮುದಾಯದ ಹೊಣೆ ಕೂಡ ಹೌದು. ಆದ್ದರಿಂದ ಸಮುದಾಯ ಕೂಡ ಸರಕಾರಿ ಇಲಾಖೆಯ ಜತೆಗೆ ಕೈಜೋಡಿಸಬೇಕು.

    ಮಕ್ಕಳನ್ನು ಮೊಬೈಲ್ ನಿಂದ ಹೊರತರುವ ನಿಟ್ಟಿನಲ್ಲಿ ಆಟಪಾಠಗಳನ್ನು ಜಾರಿಗೊಳಿಸಬೇಕು ಎಂದು ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸಲಹೆ ನೀಡಿದರು.

    ಮಕ್ಕಳ ಕಳ್ಳ ಸಾಗಾಣಿಕೆ, ಕಾಣೆಯಾದ ಪ್ರಕರಣಗಳು, ಪೋಕ್ಸೋ ಮತ್ತಿತರ ಪ್ರಕರಣಗಳ ಬಗ್ಗೆ ನಿಗಾ ವಹಿಸಬೇಕು ಎಂದು ಪೊಲೀಸ್ ಅಧಿಕಾರಿಗಳಿಗೆ ಕೆ.ನಾಗಣ್ಣಗೌಡ ಅವರು ತಿಳಿಸಿದರು.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    ಕಾರವಾರ: ಕಾರ್ಮಿಕರು ಸರ್ಕಾರದಿಂದ ಸಿಗುವ ಸೌಲಭ್ಯಗಳ ಸದುಪಯೋಗ ಪಡೆದುಕೊಳ್ಳಿ: ನ್ಯಾ.ಕವಿತಾ ಎಸ್.ಉಂಡೋಡಿ

    May 9, 2026

    Comments are closed.

    Our Picks

    ಪಂಚ ರಾಜ್ಯಗಳ ಚುನಾವಣೆ ಫಲಿತಾಂಶ: ತಮಿಳುನಾಡಿನಲ್ಲಿ ನಟ ವಿಜಯ್ ಅಬ್ಬರ, ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಮುನ್ನಡೆ

    May 4, 2026

    ಜಾಮೀನಿಗಾಗಿ ಎರಡನೇ ಬಾರಿ ಸುಪ್ರೀಂ ಕೋರ್ಟ್ ಕದ ತಟ್ಟಿದ ನಟ ದರ್ಶನ್: ಮೇ 4ಕ್ಕೆ ವಿಚಾರಣೆ

    April 29, 2026

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಸಚಿವ ಡಿ. ಸುಧಾಕರ್ ನಿಧನ: ಚಿತ್ರದುರ್ಗ ಜಿಲ್ಲೆಗೆ ನಾಳೆ ರಜೆ, ರಾಜ್ಯಾದ್ಯಂತ 3 ದಿನ ಶೋಕಾಚರಣೆ ಘೋಷಣೆ

    May 10, 2026

    ಬೆಂಗಳೂರು: ಹಿರಿಯೂರು ಶಾಸಕ ಹಾಗೂ ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ. ಸುಧಾಕರ್ (64) ಅವರು ಭಾನುವಾರ…

    ಭದ್ರಾವತಿ: ಅಕ್ರಮ ಸಂಬಂಧಕ್ಕೆ ಅಡ್ಡಿಯಾದ ಪತಿ ಕೊಲೆ; ಪತ್ನಿ ಹಾಗೂ ಪ್ರಿಯಕರನಿಗೆ ಮರಣದಂಡನೆ ಶಿಕ್ಷೆ

    May 10, 2026

    4 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಸಚಿವ ಡಿ.ಸುಧಾಕರ್ ಅವರ ರಾಜಕೀಯ ಹಾದಿ ಹೇಗಿತ್ತು?

    May 10, 2026

    ಕರ್ನಾಟಕದಲ್ಲಿ ಸಿಎಂ ಎಷ್ಟು ದಿನ ಇರ್ತಾರೋ ಗೊತ್ತಿಲ್ಲ: ರಾಜ್ಯ ಸರ್ಕಾರದ ವಿರುದ್ಧ ಪ್ರಧಾನಿ ಮೋದಿ ವಾಗ್ದಾಳಿ

    May 10, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.