ಬೆಳಗಾವಿ : ಮಹಾನಗರ ಪಾಲಿಕೆಯ 21 ನೇ ಅವಧಿಗೆ ಮಹಾಪೌರ ಹಾಗೂ ಉಪಮಹಾಪೌರರ ಸ್ಥಾನಗಳಿಗೆ ಚುನಾವಣೆಯನ್ನು ನಿಗದಿಪಡಿಸಲಾಗಿದ್ದು, ಫೆಬ್ರುವರಿ 6, 2023 ರಂದು ಮಧ್ಯಾಹ್ನ್ಹ 3 ಗಂಟೆಗೆ ಬೆಳಗಾವಿಯ ಮಹಾನಗರ ಪಾಲಿಕೆ ಸಭಾಗೃಹದಲ್ಲಿ ಚುನಾವಣೆ ನಡೆಯಲಿದೆ.
ಮಹಾಪೌರರ ಸ್ಥಾನವು ಸಾಮಾನ್ಯ ಮಹಿಳೆಯರಿಗೆ ಹಾಗೂ ಉಪಮಹಾಪೌರ ಸ್ಥಾನವು ಹಿಂದುಳಿದ ವರ್ಗದ ಮಹಿಳೆಯರಿಗೆ ಮೀಸಲಾಗಿದೆ.
ಚುಣಾವಣೆ ವೇಳಾಪಟ್ಟಿ:
ಫೆಬ್ರುವರಿ 6, 2023 ರಂದು ಮುಂಜಾನೆ 10 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಮಹಾಪೌರ, ಉಪಮಹಾಪೌರ ಸ್ಥಾನಗಳಿಗೆ ನಾಮಪತ್ರಗಳನ್ನು ಸ್ವೀಕರಿಸಲಾಗುವುದು. ಮಧ್ಯಾಹ್ನ 3 ಗಂಟೆಗೆ ಸಭೆ ಪ್ರಾರಂಭವಾಗುವುದು.
ಮಧ್ಯಾಹ್ನ 3 ಗಂಟೆಯ ನಂತರ ಮಹಾಪೌರ, ಉಪಮಹಾಪೌರ ಸ್ಥಾನಕ್ಕೆ ಚುನಾವಣೆ ಪ್ರಾರಂಭವಾಗಲಿದ್ದು, ನಾಮಪತ್ರಗಳ ಪರಿಶೀಲನೆ, ಕ್ರಮಬದ್ಧ ನಾಮಪತ್ರಗಳ ಘೋಷಣೆ, ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳುವುದು, ಉಮೇದುವಾರರ ಪಟ್ಟಿ ಘೋಷಣೆ, ಅವಿರೋಧ ಆಯ್ಕೆಯಾದಲ್ಲಿ ಫಲಿತಾಂಶ ಘೋಷಣೆ, ಚುನಾವಣೆ ಅಗತ್ಯವಿದ್ದಲ್ಲಿ ಕೈ ಎತ್ತುವ ಮೂಲಕ ಮತದಾನ, ನಡವಳಿಕೆ ಪುಸ್ತಕದಲ್ಲಿ ಸದಸ್ಯರ ಸಹಿ ದಾಖಲಿಸುವುದು, ಹಾಗೂ ಮತಗಳಎಣಿಕೆ ಮತ್ತು ಫಲಿತಾಂಶ ಘೋಷಣೆ ಮಾಡಲಾಗುವುದು ಎಂದು ಅಧ್ಯಕ್ಷಾಧಿಕಾರಿಗಳು, ಮಹಾನಗರ ಪಾಲಿಕೆ(ಚುನಾವಣೆ) ಹಾಗೂ ಪ್ರಾದೇಶಿಕ ಆಯುಕ್ತರಾದ ಎಂ.ಜಿ. ಹಿರೇಮಠ ಇವರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


