ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು. ದ್ವೇಷವನ್ನು ಹರಡುವುದು ರಾಷ್ಟ್ರದ ಸಮಗ್ರತೆಗೆ ಅಪಾಯವನ್ನುಂಟು ಮಾಡುತ್ತದೆ. ಕಾಶ್ಮೀರಿ ಪಂಡಿತರ ಗಾಯಗಳನ್ನು ಗುಣಪಡಿಸಲು ದ್ವೇಷದ ಬದಲು ಪ್ರೀತಿಯನ್ನು ನೀಡಬೇಕು ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದನೆ ಸಕ್ರಿಯವಾಗಿದ್ದು, ಪಾಕಿಸ್ತಾನದೊಂದಿಗೆ ಮಾತುಕತೆ ನಡೆಸಿದರೆ ಮಾತ್ರ ಅದನ್ನು ತಡೆಯಲು ಸಾಧ್ಯ ಎಂದು ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.
ದೇಶದಲ್ಲಿ ಭಯೋತ್ಪಾದನೆ ಸಕ್ರಿಯವಾಗಿದೆ. ಪಾಕಿಸ್ತಾನ ಮಾತುಕತೆಗೆ ಸಿದ್ಧವಾಗುವವರೆಗೆ ಇದು ನಿಲ್ಲುವುದಿಲ್ಲ. 16 ಬಾರಿ ನಮ್ಮ ಗಡಿ ದಾಟಿದ ಚೀನಾದೊಂದಿಗೆ ಮಾತನಾಡಬಹುದಾದ ನೀವು ಪಾಕಿಸ್ತಾನದೊಂದಿಗಿನ ಮಾತುಕತೆಯಿಂದ ಏಕೆ ಹಿಂದೆ ಸರಿಯುತ್ತಿದ್ದೀರಿ?ಭಯೋತ್ಪಾದನೆಯನ್ನು ಕೊನೆಗೊಳಿಸಲು ಪ್ರಯತ್ನಗಳು ಮುಂದುವರಿಯಬೇಕು ಎಂದು ಹೇಳಿದ್ದಾರೆ.
ಆದರೆ ಬಿಜೆಪಿ ಸರಕಾರ ಹಿಂದೇಟು ಹಾಕುತ್ತಿದೆ. ಬಿಜೆಪಿ ವೋಟ್ ಬ್ಯಾಂಕ್ ಗುರಿಯಾಗಿಟ್ಟುಕೊಂಡು ದ್ವೇಷ ಹರಡುತ್ತಿದೆ. ಪಾಕಿಸ್ತಾನದಲ್ಲಿ ವಾಸಿಸುವ ಹಿಂದೂಗಳು ಮತ್ತು ಭಾರತದಲ್ಲಿ ಮುಸ್ಲಿಮರ ಸುರಕ್ಷತೆಯ ಬಗ್ಗೆ ಕಾಳಜಿಯಿಲ್ಲದೆ ದ್ವೇಷವನ್ನು ಹರಡಲಾಗುತ್ತದೆ. ಜನರ ಹೃದಯದಿಂದ ದ್ವೇಷವನ್ನು ತೊಡೆದುಹಾಕದಿದ್ದರೆ, ಭಾರತದ ಅಖಂಡತೆಗೆ ಧಕ್ಕೆ ಬರುತ್ತದೆ ಎಂದು ಅವರು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


