ತುಮಕೂರು: ತ್ರಿವಿಧ ದಾಸೋಹಿ, ಮಹಾಶಿವಯೋಗಿ, ಪದ್ಮವಿಭೂಷಣ, ಕರ್ನಾಟಕ ರತ್ನ ಡಾ.ಶ್ರೀ ಶ್ರೀ ಶಿವಕುಮಾರ ಮಹಾಸ್ವಾಮೀಜಿಯ 4ನೇ ಪುಣ್ಯಸಂಸ್ಮರಣೋತ್ಸವವು ಜನವರಿ 21ರಂದು ಶ್ರೀ ಸಿದ್ದಗಂಗಾ ಕ್ಷೇತ್ರದಲ್ಲಿ ನಡೆಯಲಿದೆ.
ಬೆಳಗ್ಗೆ 10:30ಕ್ಕೆ ಶಿವಕುಮಾರ ಸ್ವಾಮಿಗಳ ನಾಲ್ಕನೇ ಪುಣ್ಯ ಸಂಸ್ಮರಣೋತ್ಸವ ಸಮಾರಂಭ ನಡೆಯಲಿದ್ದು, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅಧ್ಯಕ್ಷತೆ ವಹಿಸಲಿದ್ದಾರೆ.
ಶ್ರೀ ಶ್ರೀ ಸಿದ್ದಗಂಗಾ ಮಹಾಸ್ವಾಮಿಗಳು ಕಾರ್ಯಕ್ರಮದ ನೇತೃತ್ವ ವಹಿಸಲಿದ್ದಾರೆ. ಬೆಂಗಳೂರು ಬೇಲಿಮಠದ ಅಧ್ಯಕ್ಷರಾದ ಶಿವಾನುಭವಚರಮೂರ್ತಿ ಶ್ರೀ ಶ್ರೀ ಶಿವರುದ್ರ ಮಹಾಸ್ವಾಮಿಗಳು ದಿವ್ಯಸಾನ್ನಿಧ್ಯ ವಹಿಸಲಿದ್ದಾರೆ.
ಶಿವಕುಮಾರ ಮಹಾಸ್ವಾಮಿಗಳ ಕುರಿತ ಲೇಖನಗಳ ಸಂಗ್ರಹದ ‘ವಿಶ್ವಜ್ಯೋತಿ’ ಪುಸ್ತಕವನ್ನು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಬಿಡುಗಡೆಗೊಳಿಸಲಿದ್ದಾರೆ. ಸಚಿವ ವಿ.ಸೋಮಣ್ಣ ಅವರು ಭಕ್ತಿ ಸಮರ್ಪಣೆ ಮಾಡಲಿದ್ದಾರೆ.
ವಿಶೇಷ ಆಹ್ವಾನಿತರಾಗಿ ಮಾಜಿ ಉಪ ಮುಖ್ಯಮಂತ್ರಿ, ಕೊರಟಗೆರೆ ಶಾಸಕ ಡಾ.ಜಿ.ಪರಮೇಶ್ವರ್, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಸಂಸದ ತೇಜಸ್ವಿ ಸೂರ್ಯ, ತುಮಕೂರು ನಗರ ಶಾಸಕ ಜೆ.ಬಿ.ಜ್ಯೋತಿಗಣೇಶ್, ವಿಧಾನ ಪರಿಷತ್ ಸದಸ್ಯ ವೈ.ವಿ.ನಾರಾಯಣಸ್ವಾಮಿ, ತುಮಕೂರು ಗ್ರಾಮಾಂತರ ಶಾಸಕ ಡಿ.ಸಿ.ಗೌರಿಶಂಕರ್, ವಿಧಾನ ಪರಿಷತ್ ಸದಸ್ಯ ಚಿದಾನಂದ ಎಂ. ಗೌಡ, ವಿಧಾನ ಪರಿಷತ್ ಸದಸ್ಯ ರಾಜೇಂದ್ರ ರಾಜಣ್ಣ, ತುಮಕೂರು ಮಹಾನಗರ ಪಾಲಿಕೆ ಮೇಯರ್ ಪ್ರಭಾವತಿ ಸುಧೀಶ್ವರ್ ವಿಶೇಷ ಆಹ್ವಾನಿತರಾಗಿ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1