ತುಮಕೂರು: ನಮ್ಮ ತುಮಕೂರು ಮಾಧ್ಯಮದ ಬೆಂಗಳೂರು ವರದಿಗಾರರಾದ ಆಂಟೋನಿ ರಾಜು ಎ. ಅವರು ಮಾತೃಭೂಮಿ ಸೇವಾ ರತ್ನ ಪ್ರಶಸ್ತಿಗೆ ಪಾತ್ರರಾಗಿದ್ದಾರೆ.
ಪ್ರತಿ ವರ್ಷವೂ ಮಾತೃಭೂಮಿ ಸೇವಾ ಟ್ರಸ್ಟ್ ವಿವಿಧ ರಂಗಗಳಲ್ಲಿ ಸಾಮಾಜಿಕವಾಗಿ ಸೇವೆ ಸಲ್ಲಿಸಿದ ಈ ಸಾಧಕರಿಗೆ ಒಂದು ಗೌರವವಾಗಿ ಗುರುತಿಸುವ ಕಾರ್ಯ ಮಾಡುತ್ತಿದೆ. ಈ ಬಾರಿಯೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಗುರುತಿಸಿ ಮಾತೃಭೂಮಿ ಸೇವಾ ರತ್ನ ಪ್ರಶಸ್ತಿ, ರಾಜ್ಯ ಪ್ರಶಸ್ತಿ ಕರ್ನಾಟಕ ಸೇವಾ ರತ್ನ ಪ್ರಶಸ್ತಿ ಹಾಗೂ ವರ್ಷದ ಕನ್ನಡಿಗ 2023 ರಾಜ್ಯ ಪ್ರಶಸ್ತಿಯನ್ನು ನೀಡುತ್ತಿದೆ.
ಮಾತೃಭೂಮಿ ಸೇವಾ ಟ್ರಸ್ಟ್ ಸಂಸ್ಥಾಪಕ ಅಧ್ಯಕ್ಷರಾದ ಡಾ.ಜ್ಯೋತಿ ಶ್ರೀನಿವಾಸ್ ರವರು ಸಾಧಕರನ್ನು ಗುರುತಿಸುವ ಕಾರ್ಯವನ್ನು ಮಾಡುತ್ತಾ ಬಂದಿದ್ದಾರೆ. ತುಮಕೂರು ಮಾತ್ರವಲ್ಲದೇ ಇಡೀ ಕರ್ನಾಟಕದಲ್ಲಿ ಪ್ರತಿಭೆಗಳನ್ನು ಗುರುತಿಸಿ ಪ್ರೋತ್ಸಾಹಿಸುತ್ತಿದ್ದಾರೆ.
ರಾಜಕೀಯವಾಗಿ, ಸಾಮಾಜಿಕ ಕಾರ್ಯಕರ್ತರಾಗಿ, ಪತ್ರಕರ್ತರುಗಳಿಗೆ, ಇನ್ನು ವಿವಿಧ ರಂಗಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಅನೇಕರು ಇಂದು ಕನ್ನಡ ಸಂಭ್ರಮ ಹಬ್ಬ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ಇಂದು ಬೆಳಗ್ಗೆ 10 ಗಂಟೆಗೆ ತುಮಕೂರಿನ ಆಮಾನಿಕೆರೆ ಬಳಿಯ ಕನ್ನಡ ಭವನದಲ್ಲಿ ಕಾರ್ಯಕ್ರಮ ನಡೆಯಲಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1