ಬೆಳಗಾವಿ : ವಿದ್ಯುತ್ ಮಗ್ಗ ಹಾಗೂ ಮಗ್ಗಪೂರ್ವ ಘಟಕಗಳ ನೇಕಾರರು ಹಾಗೂ ಕಾರ್ಮಿಕರಿಗೆ ತಲಾ ರೂ.5,000/- ಗಳ ವಾರ್ಷಿಕ ಆರ್ಥಿಕ ನೆರವು ನೀಡುವ ನೇಕಾರ ಸಮ್ಮಾನ(ವಿದ್ಯುತ್ ಮಗ್ಗ) ಯೋಜನೆಯನ್ನು ಜಾರಿಗೊಳಿಸಲಾಗಿರುತ್ತದೆ.
ಸದರಿ ಯೋಜನೆಯಡಿ ನೆರವು ಪಡೆಯಲು ನೇಕಾರರ ಘಟಕಗಳು ವಿದ್ಯುತ್ ಮಗ್ಗ ಗಣತಿಯಲ್ಲಿ ನೋಂದಾಯಿಸಿಕೊಂಡಿರಬೇಕು. ಸದರಿ ಗಣತಿಯನ್ನು ಎ.ಐ.ಎಮ್.ಎಸ್ ಸಂಸ್ಥೆಯಿಂದ ಕೈಗೊಳ್ಳಲಾಗುತ್ತಿದ್ದು, ಗಣತಿಯಲ್ಲಿ ನೋಂದಾಯಿಸಲು ಬಿಟ್ಟು ಹೋದ ಘಟಕದವರು ಯಾವುದೇ ಮದ್ಯವರ್ತಿಗಳ ಆಸೆ-ಆಮಿಷಕ್ಕೆ ಒಳಗಾಗದೇ, ನೇರವಾಗಿ ಈ ಕಛೇರಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ.
ನೇಕಾರ ಸಮ್ಮಾನ ಯೋಜನೆಯಡಿ ಆರ್ಥಿಕ ನೆರವನ್ನು ಪಡೆಯಲು ಯಾವುದೇ ಅರ್ಜಿ ಅಥವಾ ಆನ್‍ಲೈನ್ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ ಹಾಗೂ ಯಾವುದೇ ಶುಲ್ಕ ಇರುವುದಿಲ್ಲ.
ಹೆಚ್ಚಿನ ಮಾಹಿತಿಗಾಗಿ ಈ ಕಛೇರಿ ದೂರವಾಣಿ ಸಂಖ್ಯೆ: 0831-2950674 ಗೆ ಸಂಪರ್ಕಿಸಬಹುದು ಎಂದು ಕೈಮಗ್ಗ ಮತ್ತು ಜವಳಿ ಇಲಾಖೆ ಜಿಲ್ಲಾ ಪಂಚಾಯತ್ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


