ತುಮಕೂರು:ಇಂದು ತುಮಕೂರಿನ ಸಿದ್ದಗಂಗಾ ಮಠದ ತ್ರಿವಿಧ ದಾಸೋಹಿ ಎಂದೇ ಪ್ರಸಿದ್ದರಾದ ಡಾ ಶಿವಕುಮಾರ ಶ್ರೀಗಳ 4ನೇ ವರ್ಷದ ಪುಣ್ಯಸ್ಮರಣೆ ಕಾರ್ಯಕ್ರಮ ನಡೆದಿದ್ದು ಮುಖ್ಯಮಂತ್ರಿಗಳಾದ ಬಸವರಾಜ್ ಬೊಮಾಯ್ಮಿ,ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಕೇಂದ್ರದ ನಾಯಕರು,ರಾಜ್ಯದ ನಾಯಕರು ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು.
ಇಂದು ಬೆಳಗ್ಗೆ ತುಮಕೂರಿಗೆ ಆಗಮಿಸಿದ ಮುಖ್ಯಮಂತ್ರಿಗಳು ಶಿವಕುಮಾರ ಸ್ವಾಮಿಗಳ ಗದ್ದುಗೆಗೆ ಪೂಜೆ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಶ್ರೀಗಳ ಗದ್ದುಗೆಗೆ ನಮಸ್ಕಾರ ಮಾಡಿರುವುದು ಮನಸ್ಸಿಗೆ ಸಂತೋಷವಾಗಿದೆ. ಅವರ ಆಶೀರ್ವಾದ ಈ ನಾಡಿನ ಜನತೆಯ ಮೇಲೆ ಇರುತ್ತದೆ. ಶಿವಕುಮಾರ ಸ್ವಾಮಿಗಳ ಹುಟ್ಟೂರಲ್ಲಿ ನಿರ್ಮಾಣವಾಗುತ್ತಿರುವ ಪುತ್ಥಳಿ ನಿರ್ಮಾಣ ಕಾರ್ಯ ಸ್ಥಗಿತವಾಗಿರುವುದರ ಬಗ್ಗೆ ತಾವು ಮೊನ್ನೆ ಹೋಗಿ ಪರಿಶೀಲಿಸಿದ್ದು, ಶೀಘ್ರವೇ ಕೆಲಸ ಪುನಾರಂಭವಾಗಲಿದೆ ಎಂದು ಸಿಎಂ ಹೇಳಿದರು.
ಫೆಬ್ರವರಿ ತಿಂಗಳಲ್ಲಿ ಸರ್ಕಾರದ ವತಿಯಿಂದ ದಾಸೋಹ ದಿನವನ್ನು ಇಡೀ ರಾಜ್ಯದಲ್ಲಿ ಆಚರಿಸಲಾಗುವುದು.ವಿಶೇಷವಾಗಿ ದೊಡ್ಡ ಪ್ರಮಾಣದಲ್ಲಿ ದಾಸೋಹ ಮಾಡುತ್ತಿರುವ ಮಠಮಾನ್ಯಗಳಲ್ಲಿ ಈ ದಿನವನ್ನು ಆಚರಣೆ ಮಾಡಬೇಕೆಂದು ತೀರ್ಮಾನಿಸಲಾಗುವುದಾಗಿ ಅವರು ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy