ಮೈಸೂರು: ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ಪ್ರಚಾರ ಮಾಡಿದ್ರೂ ಕೋಲಾರ ಕ್ಷೇತ್ರದಲ್ಲಿ ನನ್ನ ಗೆಲುವು ಖಚಿತ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಈ ಸಂಬಂಧ ಮಾತನಾಡಿದ ಅವರು, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿಎಲ್, ಸಂತೋಷ್ ಬರಲಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಜಾ, ಪ್ರಧಾನಿ ಮೋದಿ ಅಥವಾ ಕೇಂದ್ರ ಗೃಹ ಸಚಿವ ಅಮಿತ್ ಶಾ ಯಾರೇ ಬಂದೂ ನನ್ನು ವಿರುದ್ಧವಾಗಿ ಪ್ರಚಾರ ಮಾಡಲಿ, ಕೋಲಾರದಿಂದ ಗೆಲುವು ನಿಶ್ಚಿತ ಎಂದಿದ್ದಾರೆ.
ವಯಸ್ಸು ಹಾಗೂ ದೂರದ ಸಮಸ್ಯೆಯಿಂದಾಗಿ ಬಾಗಲಕೋಟೆ ಜಿಲ್ಲೆಯ ಬಾದಾಮಿಯ ಕ್ಷೇತ್ರದ ಬದಲು ಕೋಲಾರದಲ್ಲಿ ಸ್ಪರ್ಧಿಸುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.
ಕೋಲಾರದಲ್ಲಿ ಸಿದ್ದರಾಮಯ್ಯ ವಿರುದ್ಧ ಋಣಾತ್ಮಕ ಪ್ರಚಾರಗಳು ನಡೆಯುತ್ತಿರುವ ಬಗ್ಗೆ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, 2018 ರ ವಿಧಾನಸಭಾ ಚುನಾವಣೆಯಲ್ಲಿ ಬಾದಾಮಿಯಲ್ಲೂ ಅದೇ ರೀತಿ ಪ್ರಯತ್ನ ನಡೆಸಿದ್ದಾರೆ. ಇದಲ್ಲದೇ ಅಮಿತ್ ಶಾ ಮತ್ತು ಇತರ ಹಿರಿಯ ಬಿಜೆಪಿ ನಾಯಕರ ಪ್ರಚಾರದ ಹೊರತಾಗಿಯೂ ತಾನು ಚುನಾವಣೆಯಲ್ಲಿ ಗೆದ್ದಿದ್ದೇನೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


