ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾರತದ ಪ್ರಧಾನಿಯಾಗಲು ಸಮರ್ಥರಾಗಿದ್ದಾರೆ ಎಂದು ಶಿವಸೇನಾ ಸಂಸದ ಸಂಜಯ್ ರಾವತ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಭಾರತ್ ಜೋಡೋ ಯಾತ್ರೆ ಬಗ್ಗೆ ಮಾತನಾಡಿರುವ ಅವರು, “ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರಾಹುಲ್ ಗಾಂಧಿಯವರ ಯಾತ್ರೆಯ ಉದ್ದೇಶ ದ್ವೇಷ ಮತ್ತು ಭಯವನ್ನು ಹೋಗಲಾಡಿಸುವುದೇ ಹೊರತು. ವಿರೋಧ ಪಕ್ಷಗಳನ್ನು ತಮ್ಮ ಪಕ್ಷದ ಬ್ಯಾನರ್ ಅಡಿಯಲ್ಲಿ ಒಗ್ಗೂಡಿಸುವುದು ಅಲ್ಲಎಂದಿದ್ದಾರೆ.
ಕಾಂಗ್ರೆಸ್ ಪಕ್ಷವನ್ನು ಹೊರತುಪಡಿಸಿ ಯಾವುದೇ ತೃತೀಯ ರಂಗ ಯಶಸ್ವಿಯಾಗುವುದಿಲ್ಲ ಎಂದು ಇದೇ ವೇಳೆ ಹೇಳಿದ ಅವರು, ಸೈದ್ಧಾಂತಿಕ ಮತ್ತು ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ರಾಹುಲ್ ಗಾಂಧಿ ತಮ್ಮ ನಾಯಕತ್ವದ ಗುಣಗಳನ್ನು ತೋರಿಸುತ್ತಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


