ಪಾವಗಡ: ಪಟ್ಟಣದ ಕೆಲವು ಬಡಾವಣೆಗಳಲ್ಲಿ ರಾತ್ರಿ ವೇಳೆ ಕರಡಿಗಳು ಓಡಾಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ವಲಯ ಅರಣ್ಯಾಧಿಕಾರಿ ಕೆ.ಎಸ್. ಸತೀಶ್ ಚಂದ್ರ ಮಹತ್ವದ ಸೂಚನೆ ನೀಡಿದ್ದಾರೆ.
ಪೆನುಗೊಂಡ ರಸ್ತೆಯ ಬಡಾವಣೆಗೆ ಹೊಂದಿಕೊಂಡು ಸಪೋಟ ಗಿಡಗಳಿದ್ದು ಹಣ್ಣು ತಿನ್ನಲು ಕರಡಿಗಳು ಬರುತ್ತಿವೆ. ಕರಡಿಗಳನ್ನು ಕಂಡರೆ ಸಾರ್ವಜನಿಕರು ತಕ್ಷಣವೇ ಅರಣ್ಯ ಇಲಾಖೆ ಸಿಬ್ಬಂದಿಗೆ ಮಾಹಿತಿ ನೀಡಬೇಕು. ಸಾರ್ವಜನಿಕರು ಯಾವುದೇ ಕಾರಣಕ್ಕೆ ಕರಡಿಗೆ ಕಲ್ಲು ಹೊಡೆಯುವುದು ಕೋಲಿನಿಂದ ಅಟ್ಟಿಸಿಕೊಂಡು ಹೋಗುವುದು ಗಾಬರಿಗೊಳಿಸುವ ಕೆಲಸ ಮಾಡಬಾರದು ಎಂದು ಸತೀಶ್ ಚಂದ್ರ ಸಲಹೆ ನೀಡಿದ್ದಾರೆ.
ಈಗಾಗಲೇ ಕರಡಿಗಳು ಓಡಾಡುತ್ತಿರುವ ಪ್ರದೇಶಗಳಲ್ಲಿ ಬೋನುಗಳನ್ನು ಇರಿಸಲಾಗಿದೆ. ಗಸ್ತು ನಡೆಸಲು ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಸಾರ್ವಜನಿಕರು ಈ ಬಗ್ಗೆ ಹೆಚ್ಚಿನ ಮಾಹಿತಿ ಪಡೆಯಲು ಮೊಬೈಲ್ ಸಂಖ್ಯೆ 94829 79112, 99023 17536 ಸಂಪರ್ಕಿಸಬಹುದು ಎಂದು ಅವರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy