ಪಾವಗಡ: ಕಳೆದ 11 ದಿನಗಳಿಂದ ಪಾವಗಡ ವ್ಯಾಪ್ತಿಯ ವಿವಿಧ ಕಡೆ ರಸ್ತೆ ಸುರಕ್ಷತಾ ಸಪ್ತಾಹ ಅಂಗವಾಗಿ ಶಾಲಾ ಕಾಲೇಜು, ಸಂಘ ಸಂಸ್ಥೆಗಳು ಸಾರ್ವಜನಿಕರಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ ಎಂದು ಪಾವಗಡ ಸಿ.ಐ.ಅಜಯ್ ಸಾರಥಿ ತಿಳಿಸಿದರು.
ಪಾವಗಡ ಪೊಲೀಸ್ ಇಲಾಖೆ ವತಿಯಿಂದ ಇಂದು ಪಟ್ಟಣದ ಶನಿಮಹಾತ್ಮಾ ವೃತ್ತ ಹಾಗೂ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮವನ್ನು ಉದ್ದೇಶಿಸಿ ಅವರು ಮಾತನಾಡುತ್ತಿದ್ದರು.
ರಸ್ತೆಯಲ್ಲಿ ವಾಹನ ಚಾಲನೆ ಮಾಡುವಾಗ ರಸ್ತೆಯ ನಿಯಮಗಳನ್ನು ಎಲ್ಲರೂ ಪಾಲಿಸುವ ಮೂಲಕ ಅಮೂಲ್ಯ ಜೀವ ಉಳಿಸಿಕೊಳ್ಳುವಂತೆ ಅವರು ಇದೇ ವೇಳೆ ಕರೆ ನೀಡಿದರು.
ಬೈಕ್ ಚಾಲನೆ ಮಾಡುವಾಗ ಹೆಲ್ಮೆಟ್ ಧರಿಸಿ, ವಾಹನ ಚಾಲನೆ ವೇಳೆ ಮೊಬೈಲ್ ಬಳಕೆ ಬೇಡ, ಒಂದೇ ಬೈಕಿನಲ್ಲಿ ಮೂವರ ಪ್ರಯಾಣ ಬೇಡ ಎಂದು ಜಾಗೃತಿ ಮೂಡಿಸಿದರಲ್ಲದೇ, ಕಡ್ಡಾಯವಾಗಿ ಡಿ.ಎಲ್., ಹೊಂದಿರುವಂತೆ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಮನವರಿಕೆ ಮಾಡಲಾಯಿತು.
ಈ ಸಂದರ್ಭದಲ್ಲಿ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಗುರುನಾಥ್, ಕಾಲೇಜು ಪ್ರಾಚಾರ್ಯರಾದ ಮಾರಪ್ಪ, ಉಪನ್ಯಾಸಕರು, ಕಾಲೇಜು ಸಿಬ್ಬಂದಿ, ವಿದ್ಯಾರ್ಥಿನಿಯರು ಹಾಜರಿದ್ದರು.
ಶ್ರೀ ಶನಿಮಹಾತ್ಮಾ ವೃತ್ತದಲ್ಲಿ ಆಯೋಜಿಸಿದ್ದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ ಕಾರ್ಯಕ್ರಮದಲ್ಲಿ ಹೆಲ್ಪ್ ಸೊಸೈಟಿ ಅಧ್ಯಕ್ಷರಾದ ಮಾನಂ ಶಶಿಕಿರಣ್, ಆಟೋ ಚಾಲಕರ ಸಂಘದ ಅಧ್ಯಕ್ಷರಾದ ಬೇಕರಿ ನಾಗರಾಜ್, ಲೋಕೇಶ್, ಅನಿಲ್ ಹಾಗೂ ಆಟೋ ಚಾಲಕರದ ಶಮಿ, ಅರುಣ, ಚಿರಂಜೀವಿ, ರಾಮಾಂಜಿ ಹಾಗೂ ಸಾರ್ವಜನಿಕರು ಭಾಗಿಯಾಗಿದ್ದರು.
ವರದಿ: ನಂದೀಶ್ ನಾಯ್ಕ್, ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1