ತುರುವೇಕೆರೆ: ತಾಲೂಕಿನ ಮಾದಿಹಳ್ಳಿ ಮಾದಿಹಳ್ಳಿ ಗ್ರಾಮ ಪಂಚಾಯತಿ ವ್ಯಾಪ್ತಿಯ ಚಿಕ್ಕೋನಹಳ್ಳಿ ಗ್ರಾಮದಲ್ಲಿ ಬಿ ಜೆ ಪಿ ಪಕ್ಷದ ವತಿಯಿಂದ “ವಿಜಯ ಸಂಕಲ್ಪ ಅಭಿಯಾನ” ವನ್ನು ಹಮ್ಮಿಕೊಳ್ಳಲಾಗಿತ್ತು .
ಈ ಅಭಿಯಾನದಲ್ಲಿ ಬಿಜೆಪಿ ಪಕ್ಷಕ್ಕೆ ನೋಂದಣಿಯನ್ನು ಮಾಡಿಕೊಳ್ಳಲಾಯಿತು ಮತ್ತು ನೋಂದಣಿಯಾದ ಸದಸ್ಯರುಗಳಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸಾಧನೆಗಳನ್ನ ಮುದ್ರಿತ ಕರಪತ್ರಗಳನ್ನು ಹಂಚಲಾಯಿತು ಹಾಗೂ ಗ್ರಾಮದ ಪ್ರತಿ ಮನೆಗಳಿಗೆ ತೆರಳಿ ಮುದ್ರಿತ ಪ್ರತಿಗಳನ್ನು ನೀಡಿ ಸದಸ್ಯತ್ವ ನೋಂದಣಿ ಮಾಡಿಕೊಳ್ಳಲಾಯಿತು.
ಈ ಸಂದರ್ಭದಲ್ಲಿ ಮಾಜಿ ಎಂ.ಡಿ.ಲಕ್ಷ್ಮೀನಾರಾಯಣ್, ತುರುವೇಕೆರೆ ಮಂಡಲದ ಅಧ್ಯಕ್ಷರಾದ ಶ್ರೀ ಮೃತ್ಯುಂಜಯ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಯಶಸ್, ಮಾದಿಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಮಂಜುನಾಥ್, ಹಾಗೂ ಎಲ್ಲಾ ಬಿಜೆಪಿ ಪದಾಧಿಕಾರಿಗಳು, ಮುಖಂಡರು, ಗ್ರಾಮಸ್ಥರುಗಳು ಪಾಲ್ಗೊಂಡಿದ್ದರು.
ವರದಿ: ಸುರೇಶ್ ಬಾಬು ಎಂ, ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1