ಕೋಲಾರ: ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಸ್ತ್ರೀ ಶಕ್ತಿ ಸಂಘಗಳ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಣೆ ಮಾಡಿದರು.
ಕೋಲಾರದಲ್ಲಿ ನಡೆದ ಪ್ರಜಾಧ್ವನಿ ಯಾತ್ರೆಯಲ್ಲಿ ಮಾತನಾಡಿದ ಅವರು, ಬಿಜೆಪಿ ರೈತರ ಸಾಲ ಮನ್ನಾ ಮಾಡಿಲ್ಲ, ಅಂಬಾನಿ, ಅದಾನಿಯಂತಹ ಬಂಡವಾಳ ಶಾಹಿಗಳ ಸಾಲ ಮನ್ನಾ ಮಾಡಿದರು.
ಆದರೆ ರೈತರ ಸಾಲ ಮನ್ನಾ ಮಾಡಿಲ್ಲ. ನಾವು ನುಡಿದಂತೆ ನಡೆಯುತ್ತೇವೆ, ಹೈನುಗಾರಿಕೆಗೆ, ರೈತರಿಗೆ ಹೆಚ್ಚು ಸಹಾಯ ಧನ ಕೊಡುತ್ತೇವೆ ಎಂದರು.ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ ರಾಜಕೀಯ ಚಟುವಟಿಕೆಗಳು ರಂಗೇರಿದೆ. ರಾಜಕೀಯ ಪಕ್ಷಗಳ ಪ್ರಚಾರದ ಭರಾಟೆ ಜೋರಾಗಿ ನಡೆಯುತ್ತಿದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


