ತುರುವೇಕೆರೆ: ಕೊಬ್ಬರಿಗೆ ಕನಿಷ್ಠ ಬೆಲೆಗೆ ಕೃಷಿ ರೈತ ಬಂಧು ವೇದಿಕೆಯ ರಾಜ್ಯಾಧ್ಯಕ್ಷ ಟಿ. ಹೊನ್ನೇಗೌಡ ರಾಜ್ಯ ಸರ್ಕಾರವನ್ನು ಒತ್ತಾಯಿಸಿದರು.
ಪಟ್ಟಣದಲ್ಲಿರುವ ಪ್ರವಾಸಿ ಮಂದಿರದಲ್ಲಿ ಇಂದು ಕರೆದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಸಂಕಷ್ಟದಲ್ಲಿರುವ ರೈತರ ನೆರವಿಗೆ ಸರ್ಕಾರ ಒತ್ತು ನೀಡಬೇಕು ಎಂದು ಒತ್ತಾಯಿಸಿದರು.
ತೆಂಗು ಬೆಳೆಗಾರರ ನೆರವಿಗೆ ಬಂದು ರೈತರನ್ನು ಸರ್ಕಾರ ಕಾಪಾಡಬೇಕು. ಇನ್ನೂ ರೈತರಿಗೆ ದುಬಾರಿ ಬೆಲೆಯಾಗಿರುವ ಗೊಬ್ಬರ, ಡೀಸೆಲ್ ಮತ್ತು ಕೃಷಿ ಪರಿಕರಗಳ ನಿರ್ವಹಣೆ ಕಷ್ಟವಾಗಿದ್ದು, ಕೂಡಲೇ ಸರ್ಕಾರ ರೈತರ ನೆರವಿಗೆ ಧಾವಿಸಬೇಕು ಎಂದು ಅವರು ಒತ್ತಾಯಿಸಿದರು.
ಜೊತೆಗೆ ವ್ಯವಸಾಯೋತ್ಪನ್ನ ಮಾರುಕಟ್ಟೆಯಲ್ಲಿ ದಳ್ಳಾಳಿಗಳಿಂದ ಆಗುತ್ತಿರುವ ಕಿರುಕುಳಗಳನ್ನು ತಪ್ಪಿಸಲು ಕೂಡಲೇ ನಫೆಡ್ ತೆರೆದು ರೈತರಿಗೆ ಅನುಕೂಲ ಮಾಡಿಕೊಡಬೇಕು, ಕೊಬ್ಬರಿ ಬೆಲೆಯನ್ನು ಈ ಕೂಡಲೇ ಕನಿಷ್ಠ ಪ್ರತಿ ಕ್ವಿಂಟಾಲ್ ಗೆ 15,000 ನಿಗದಿಪಡಿಸಬೇಕು ಇಲ್ಲವಾದಲ್ಲಿ ರೈತರ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗುವ ಸಂಭವವಿದೆ ಎಂದು ಅವರು ಆತಂಕ ವ್ಯಕ್ತಪಡಿಸಿದರು.
ರೈತರ ಸಮಸ್ಯೆಗೆ ಕೂಡಲೇ ಸ್ಪಂದಿಸಿ ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಸಂಘಟನೆಯ ವತಿಯಿಂದ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕೃಷಿ ರೈತ ಬಂಧು ವೇದಿಕೆಯ ತಾಲೂಕು ಗೌರವಾಧ್ಯಕ್ಷರನ್ನಾಗಿ ಹೆಡಗಿಹಳ್ಳಿ ವಿಶ್ವನಾಥ್ ಅವರನ್ನು ನೇಮಕ ಮಾಡಲಾಯಿತು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1