ಬೆಳಗಾವಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಯಾವುದೇ ಕಾರಣಕ್ಕೂ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಲ್ಲ. ಸುಮ್ಮನೆ ಅವರು ಹವಾ ಎಬ್ಬಿಸಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಹೇಗಾದರೂ ಮಾಡಿ ನಾವು ಬಿಜೆಪಿ ಸರ್ಕಾರ ಮಾಡ್ತಿವಿ ಬಿಡುವುದಿಲ್ಲ. ಒಂದು ಸ್ವಲ್ಪ ಕಡಿಮೆ ಸೀಟ್ ಬಂದರೂ ಏನಾದರೂ ಗುದ್ದಾಡಿ ಬಿಜೆಪಿ ಸರ್ಕಾರ ಮಾಡ್ತೀವಿ, ತಲೆಕೆಡಿಸಿಕೊಳ್ಳಬೇಡಿ ಮುಂದೆ ಮತ್ತೆ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ ಎಂದರು.
ಇನ್ನು ರಮೇಶ್ ಜಾರಕಿಹೊಳಿ ಬಿಜೆಪಿ ಬಿಡ್ತಾರೆ ಅಂತಾ ಮಾಧ್ಯಮಗಳಲ್ಲಿ ಸೃಷ್ಟಿ ಮಾಡುತ್ತಿದ್ದಾರೆ. ನಾನು ಯಾವುದೇ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲ. ಬಿಜೆಪಿಯಲ್ಲೇ ಇರೋನು ನಾನು, ಇಲ್ಲಿ ಇದ್ದು ಇತಿಹಾಸ ಮಾಡಿಯೇ ಹೋಗುತ್ತೇನೆ ಎಂದು ಹೇಳಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


