ಬೆಂಗಳೂರು : ಫೆಬ್ರವರಿ 10 ರಿಂದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಫೆಬ್ರವರಿ 17 ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಜೆಟ್ ಮಂಡಿಸಲಿದ್ದಾರೆ.ಈ ಕುರಿತು ಫೆಬ್ರವರಿ 10 ರಿಂದ ಬಜೆಟ್ ಅಧಿವೇಶನ ಆರಂಭವಾಗುವ ಬಗ್ಗೆ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಇಲಾಖಾವಾರು ಬಜೆಟ್ ಪೂರ್ವಭಾವಿ ಸಭೆ ಆರಂಭಿಸಿದ್ದು, ಈ ಬಾರಿ ಬಜೆಟ್ ನಲ್ಲಿ ಬಂಪರ್ ಘೋಷಣೆಗಳನ್ನು ಮಾಡುವ ಸಾಧ್ಯತೆ ಇದೆ.
ವಿಧಾನಸಭಾ ಚುನಾವಣೆ ಸಮೀಪವಿರುವ ಹಿನ್ನೆಲೆಯಲ್ಲಿ ಬಜೆಟ್ ನಲ್ಲಿ ಉಚಿತ ವಿದ್ಯುತ್ ಪೂರೈಕೆ, ವಿವಿಧ ಪಿಂಚಣಿ ಹೆಚ್ಚಳ, ಸಾರ್ವಜನಿಕ ವಿತರಣಾ ವ್ಯವಸ್ಥೆಯಲ್ಲಿ ಹೆಚ್ಚಿನ ಸಬ್ಸಿಡಿ ನೀಡುವಂತಹ ಯೋಜನೆಗಳು, ಕಲ್ಯಾಣ ಕರ್ನಾಟಕಕ್ಕೆ ಹಲವು ಯೋಜನೆಗಳನ್ನು ಘೋಷಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


