ಬೆಂಗಳೂರು: ತಕ್ಷಣದಿಂದ ಜಾರಿಗೆ ಬರುವಂತೆ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ ಪ್ರಕ್ರಿಯೆ ರದ್ದು ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ.
ಹೆಚ್ಚುವರಿ ಶಿಕ್ಷಕರಿಗೆ ಕೌನ್ಸೆಲಿಂಗ್ ಮೂಲಕ ಸ್ಥಳ ನಿಯೋಜನೆಗೆ ಪ್ರಕ್ರಿಯೆ ಕೈಗೊಂಡಿದ್ದು, ಇದನ್ನು ತಕ್ಷಣದಿಂದ ಜಾರಿಗೆ ಬರುವಂತೆ ಮುಂದಿನ ಆದೇಶದವರೆಗೆ ರದ್ದುಗೊಳಿಸಲಾಗಿದೆ.
ಜನವರಿ 24ರಂದು ಕೌನ್ಸೆಲಿಂಗ್ ನಲ್ಲಿ ಯಾವುದಾದರೂ ಹೆಚ್ಚುವರಿ ಶಿಕ್ಷಕರಿಗೆ ಸ್ಥಳ ನಿಯೋಜನೆ ಆದೇಶ ನೀಡಿದ್ದಲ್ಲಿ ಅದನ್ನು ಹಿಂಪಡೆಯಲು ಸೂಚಿಸಲಾಗಿದೆ. ಪರಿಷ್ಕೃತ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಹೇಳಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


