ತುಮಕೂರು: ನಮ್ಮ ಸರ್ಕಾರ ಹೋಗಲು ಸಿದ್ದರಾಮಯ್ಯ ಕಾರಣ ಎಂದು ಕುಮಾರಸ್ವಾಮಿ ಹೇಳುತ್ತಾರೆ, ಕೊಟ್ಟ ಕುದುರೆ ಏರಲಾರದವ ವೀರನು ಅಲ್ಲ, ಶೂರನೂ ಅಲ್ಲ. ಇದು ಕುಮಾರಸ್ವಾಮಿ ಅವರಿಗೆ ಹೊಂದಿಕೆಯಾಗುತ್ತದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ, ಕುಮಾರಸ್ವಾಮಿ ವಿರುದ್ಧ ವಾಗ್ದಾಳಿ ನಡೆಸಿದರು.
ತುಮಕೂರಿನಲ್ಲಿ ಮಂಗಳವಾರ ಆಯೋಜಿಸಿದ್ದ ಪ್ರಜಾಧ್ವನಿ ಸಮಾವೇಶದಲ್ಲಿ ಮಾತನಾಡಿದ ಅವರು, ಕೊಟ್ಟ ಅಧಿಕಾರವನ್ನು ಉಳಿಸಿಕೊಳ್ಳಲಾಗದೆ ಈಗ ನಮ್ಮ ಮೇಲೆ ಗೂಬೆ ಕೂರಿಸಲಿ ಎಂದು ನಾವು ನಿಮಗೆ ಅಧಿಕಾರ ನೀಡಿದ್ದಾ ಕುಮಾರಸ್ವಾಮಿ? ಎಂದು ಅವರು ಪ್ರಶ್ನಿಸಿದರು.
ಬಿಜೆಪಿಗೂ ಜೆಡಿಎಎಸ್ ಗೂ ಯಾವ ವ್ಯತ್ಯಾಸವೂ ಇಲ್ಲ, ಬಿಜೆಪಿ ಬಹಿರಂಗವಾಗಿ ಅಲ್ಪಸಂಖ್ಯಾತರ ವಿರೋಧ ಮಾಡಿದರೆ, ಜೆಡಿಎಸ್ ನವರು ಒಳಗೊಳಗೆ ವಿರೋಧ ಮಾಡುತ್ತಾರೆ. ಇಂಥವರ ಮಾತುಗಳನ್ನು ಅಲ್ಪಸಂಖ್ಯಾತ ಬಂಧುಗಳು ನಂಬಿ ಮೋಸ ಹೋಗಬಾರದು ಎಂದು ಸಿದ್ದರಾಮಯ್ಯ ಕರೆ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy