ತುಮಕೂರು: ಕಾರುಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಇಬ್ಬರು ಮಹಿಳೆಯರು ಸಾವನ್ನಪ್ಪಿದ ದಾರುಣ ಘಟನೆ ತುಮಕೂರು—ಕೊರಟಗೆರೆ ರಸ್ತೆಯ ಜೆಟ್ಟಿ ಅಗ್ರಹಾರದ ಬಳಿ ಬುಧವಾರ ಸಂಭವಿಸಿದೆ.
ಮಧುಗಿರಿ ತಾಲ್ಲೂಕಿನ ಕೊಡಗಾರಹಳ್ಳಿಯ ಗುಲ್ಶೀರ್(50) ಹಾಗೂ ಮಧುಗಿರಿ ಪಟ್ಟಣದ ಜರೀನಾ(42) ಎಂಬವರು ಮೃತಪಟ್ಟ ಮಹಿಳೆಯರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ನಾಲ್ವರು ಗಾಯಗೊಂಡಿದ್ದು, ಅವರನ್ನು ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ತುಮಕೂರು ಕಡೆಯಿಂದ ಬರುತ್ತಿದ್ದ ಕಾರಿಗೆ ಕೊರಟಗೆರೆ ಕಡೆಯಿಂದ ತೆರಳುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಎರಡೂ ಕಾರುಗಳು ಜಖಂಗೊಂಡಿವೆ, ಘಟನೆ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1