ಬೆಳಗಾವಿ : ಸಿಡಿ ಪ್ರಕರಣದಲ್ಲಿ ಮಹಾನಾಯಕನ ಕೈವಾಡದ ಸಾಕ್ಷ್ಯ ಇದ್ದು, ಶೀಘ್ರದಲ್ಲಿಯೇ ಸಿಡಿ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಿಸುತ್ತೇನೆ ಎಂದು ಮಾಜಿ ಸಚಿವ ರಮೇಶ್ ಜಾರಕಿಹೊಳಿ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿ.ಕೆ. ಶಿವಕುಮಾರ್ ಗೆ ನನ್ನ ಹೆದರಿಕೆ ಇದೆ. ಇಂತಹ ನೂರು ಸಿಡಿ ಬರಲಿ ನಾನು ಗಟ್ಟಿ ಇದ್ದೇನೆ. ನನ್ನ ಕೇಸ್ ಬಿಡುವುದಿಲ್ಲ ಸಿಬಿಐಗೆ ಕೊಡಿಸುತ್ತೇನೆ ಎಂದು ವಾಗ್ದಾಳಿ ನಡೆಸಿದ್ದಾರೆ.
ಸಿಡಿ ಕೇಸ್ನಲ್ಲಿ ಮಹಾನಾಯಕನ ಕೈವಾಡ ಇರುವ ಸಾಕ್ಷ್ಯ ಇದೆ. ಈ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಜೊತೆ ಚರ್ಚಿಸಿದ್ದೇನೆ. ಸಿಡಿ ಕೇಸ್ನ ಇಬ್ಬರು ಆರೋಪಿಗಳು ಶಿರಾ, ದೇವನಹಳ್ಳಿಯವರು. ದೇವನಹಳ್ಳಿಯವನ ಮನೆ ಮೇಲೆ ದಾಳಿಯಾದಾಗ 100 ಕ್ಕೂ ಹೆಚ್ಚು ಸಿಡಿಗಳು ಸಿಕ್ಕಿವೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


