ಬೆಂಗಳೂರು: ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ಡಿ.ಕೆ.ಶಿವಕುಮಾರ್ ಹಾಗೂ ರಮೇಶ್ ಜಾರಕಿಹೊಳಿ ನಡುವೆ ವಾಕ್ಸಮರ ನಡೆದಿದೆ. ತಮ್ಮ ಮೇಲೆ ಸಿಬಿಐ ತನಿಖೆ ಮಾಡಿಸುತ್ತೇನೆ ಎಂದು ಹೇಳಿದ್ದ ರಮೇಶ್ ಜಾರಕಿಹೊಳಿಗೆ ಡಿ. ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ಅವನಿಗೆ ಪ್ಯಾಂಟ್ ಬಿಚ್ಚೋಕೆ ನಾನು ಹೇಳಿದ್ನಾ..?, ನಮ್ಮ ಕಾಂಗ್ರೆಸ್ ಪಕ್ಷ ಬೀಳಲು ಅವನೇ ಕಾರಣ, ಆಪರೇಷನ್ ಕಮಲ ಮಾಡಿ ಕಾಂಗ್ರೆಸ್ ಬೀಳಿಸಿದ್ದು ಯಾರು ಎಂದು ಪ್ರಶ್ನಿಸಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಶಾಸಕ ರಮೇಶ್ ಜಾರಕಿಹೊಳಿ ವಿರುದ್ಧ ದೂರು ನೀಡಿದ್ದೇವೆ.ಸಿಎಂ ಮತ್ತು ಅವರ ತಂಡ ಭ್ರಷ್ಟಾಚಾರದ ಪಿತಾಮಹ ಎಂದು ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


