nammatumakuru

    Subscribe to Updates

    Get the latest creative news from FooBar about art, design and business.

    What's Hot

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025
    Facebook Twitter Instagram
    ಟ್ರೆಂಡಿಂಗ್
    • ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ
    • ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ
    • ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್
    • ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!
    • ಎರಡು ಲಾರಿಗಳ ನಡುವೆ ಅಪಘಾತ: ಲಾರಿಯಿಂದ ಚೆಲ್ಲಿದ ಗೋದಿ ಕಂಡವರ ಪಾಲು!
    • ಮಧುಗಿರಿ:  ಸೊಳ್ಳೆಗಳ ವಿಪರೀತ ಕಾಟಕ್ಕೆ ಬಳಲಿ ಬೆಂಡಾದ ಜನ
    • ಮಧುಗಿರಿ: ಬಿಜೆಪಿ ಒಬಿಸಿ ಮೋರ್ಚಾ ಸಭೆ
    • ಬೀದರ್ | ಕಬ್ಬು ಬೆಲೆ ನಿಗದಿಗೆ ಆಗ್ರಹಿಸಿ ರೈತನಿಂದ ಉರುಳು ಸೇವೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಭಾರತದ ನಾರಿ ಶಕ್ತಿಯು  ಸ್ವಾವಲಂಬಿ ಮತ್ತು ಭರವಸೆಯ ಸಂಕೇತವಾಗಿದೆ:  ಇಮ್ಮಡಿ ಕರಿಬಸವ ದೇಶೀಕೇಂದ್ರ ಸ್ವಾಮೀಜಿ ಅಭಿಮತ
    ತಿಪಟೂರು January 27, 2023

    ಭಾರತದ ನಾರಿ ಶಕ್ತಿಯು  ಸ್ವಾವಲಂಬಿ ಮತ್ತು ಭರವಸೆಯ ಸಂಕೇತವಾಗಿದೆ:  ಇಮ್ಮಡಿ ಕರಿಬಸವ ದೇಶೀಕೇಂದ್ರ ಸ್ವಾಮೀಜಿ ಅಭಿಮತ

    By adminJanuary 27, 2023No Comments2 Mins Read

    ತಿಪಟೂರು : ಭಾರತದ ನಾರಿಶಕ್ತಿಯು ಇಂದಿನ ಆಧುನಿಕ ಜಗತ್ತಿನ ಸ್ವಾವಲಂಬಿ, ಪ್ರಗತಿ ಹಾಗೂ ಭರವಸೆಯ ಸಂಕೇತವಾಗಿ ಜಗತ್ತಿಗೆ ಮಾದರಿಯಾಗಿದೆ ಎಂದು ಗುರುಕುಲನಂದಾಶ್ರಮದ ಇಮ್ಮಡಿ ಕರಿಬಸವ ದೇಶೀಕೇಂದ್ರ ಸ್ವಾಮೀಜಿ ಅಭಿಪ್ರಾಯ ವ್ಯಕ್ತಪಡಿಸಿದರು.

    ತಿಪಟೂರು ತಾಲ್ಲೂಕಿನ ಗುರುಕುಲ ಸಮುದಾಯ ಭವನದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಜ್ಞಾನವಿಕಾಸ ವಿಭಾಗದಿಂದ ಹೆಣ್ಣು ಮಕ್ಕಳ ದಿನಾಚರಣೆ ಪ್ರಯುಕ್ತ ಹಮ್ಮಿಕೊಂಡಿದ್ದ ಮಹಿಳಾ ವಿಚಾರಗೋಷ್ಠಿ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.


    Provided by
    Provided by

    ರೋಟರಿ ಸಂಸ್ಥೆ ಅಧ್ಯಕ್ಷೆ Dr.T.R.ವಿಜಯಕುಮಾರಿ ಮಾತನಾಡಿ ಕೇವಲ ಅಡುಗೆ ಮನೆಗೆ ಸೀಮಿತಿಗೊಂಡಿದ್ದ ಹೆಣ್ಣುಮಕ್ಕಳ ಪರಿಸ್ಥಿತಿ ಇಂದು ಸುಧಾರಿಸಿ ಯಾರೂ ಊಹಿಸಲಾಗದ ಹಂತಕ್ಕೆ ಪುರುಷರಿಗೆ ಸವಾಲೆಸೆಯುವ ರೀತಿಯಲ್ಲಿ ಸ್ವಾವಲಂಬಿ ಜೀವನ ಸಾಗಿಸುತ್ತಿರುವುದು ಅನುಕರಣೀಯ ಎಂದರು.

    ಕುಮಾರ್ ಆಸ್ಪತೆಯ ಡಾ.ಶ್ರೀಧರ್ ಮಾತನಾಡಿ ಹಿಂದಿನ ಕಾಲದಲ್ಲಿ ಕೇವಲ ಹೊಲ ಗದ್ದೆಗಳಲ್ಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದ ಹೆಣ್ಣು ಮಗಳು ಬದಲಾದಂತೆ ಇಂದು ಅಂತರಾಷ್ಟ್ರೀಯ ಕಂಪನಿಗಳು, ಸಾಫ್ಟ್ ವೇರ್ ಕಂಪನಿಗಳು ಇನ್ನೂ ಹೆಚ್ಚಿನ ಕ್ಷೇತ್ರಗಳಲ್ಲಿ ತಮ್ಮ ಕಬಂಧಬಾಹುಗಳನ್ನು ಚಾಚಿ ತಮ್ಮದಾಗಿಸಿಕೊಂಡಿದ್ದಾರೆ. ಎಂದರು ಮಹಿಳಾ ಸಬಲೀಕರಣದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

    ಯೋಜನೆಯ ಜಿಲ್ಲಾ ನಿರ್ದೇಶಕಿ ದಯಾಶೀಲ ಮೇಡಂ ಮಾತನಾಡಿ ಯೋಜನೆಯಲ್ಲಿ ಸ್ವ ಸಹಾಯ ಸಂಘದ ಪರಿಕಲ್ಪನೆ ಪ್ರಾರಂಭ ಮಾಡಿದ್ದೇ ಮಹಿಳೆಯರ ಆರ್ಥಿಕ ಹಾಗೂ ಸ್ವಾವಲಂಬಿ ಜೀವನ ನಡೆಸಲು ಅದನ್ನು ಅನುಷ್ಠಾನ ಮಾಡಲು ಮಾತೃ ಸ್ವರೂಪಿ ಶ್ರೀಮತಿ ಹೇಮಾವತಿ ಹೆಗ್ಗಡೆಯವರ ಜ್ಞಾನ ವಿಕಾಸ ವಿಭಾಗವು ಬಹಳ ಶ್ರಮಿಸಿದ್ದು  ಇಂದು ಮಹಿಳೆಯರ ವಿವಿಧ ಉದ್ದೇಶಗಳಿಗೆ ಆರ್ಥಿಕ ನೆರವು ನೀಡುವಲ್ಲಿ ಸಹಕಾರಿಯಾಗಿದೆ. ಇದೇ ವಿಷಯ ಮುಂದುವರೆದು ಮಾತೃಶ್ರೀಯವರ ಕನಸಿನಂತೆ ಇಂದು ಗ್ರಾಮೀಣ ಭಾಗದ ಹೆಣ್ಣು ಮಕ್ಕಳಿಂದ ತಯಾರಿಸಿದ ಉತ್ಪನ್ನಗಳಿಗೆ ಸಿರಿ ಎಂಬ ಹೆಸರು ನೀಡಿ ಇಡೀ ರಾಜ್ಯಾದ್ಯಂತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದ‌್ದೇವೆ ಎಂದರು.

    ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ರೂಪಾ, ಆರ್ಥಿಕ ಸಮಾಲೋಚಕಿ ರೇಖಾ, ತಾಲ್ಲೂಕು ಯೋಜನಾಧಿಕಾರಿ ಉದಯ್ ಸರ್, ಜ್ಞಾನ ವಿಕಾಸ ಸಮನ್ವಯಾಧಿಕಾರಿ ಪದ್ಮಾವತಿ, ಸೇವಾಪ್ರತಿನಿಧಿಗಳು ಹಾಗೂ ಜ್ಞಾನವಿಕಾಸ ಕೇಂದ್ರದ ಸದಸ್ಯರು ಉಪಸ್ಥಿತರಿದ್ಧರು. ಕಾರ್ಯಕ್ರಮದಲ್ಲಿ ಮಹಿಳೆಯರು ತಾವೇ ತಯಾರಿಸಿದ ಉತ್ಪನ್ನಗಳ ಸ್ಟಾಲ್ ವಿಶೇಷವಾಗಿತ್ತು

    ವರದಿ: ಆನಂದ್, ತಿಪಟೂರು


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1

    admin
    • Website

    Related Posts

    ಕಲ್ಪತರು ತಾಂತ್ರಿಕ ಮಹಾವಿದ್ಯಾಲಯ: ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ

    November 14, 2025

    ತಿಪಟೂರು | ಸರಿಯಾಗಿ ಕಾರ್ಯನಿರ್ವಹಿಸದ ಸಂಚಾರ ಸಿಗ್ನಲ್ ಗಳು: ವಾಹನ ಚಾಲಕರಿಂದ ಆಕ್ರೋಶ

    November 10, 2025

    ಪದವೀಧರರ ಮತಪಟ್ಟಿಗೆ ಹೆಸರು ನೋಂದಾಯಿಸಲು ದಿನಾಂಕ ವಿಸ್ತರಣೆ ಮಾಡಲು ಮನವಿ

    October 30, 2025

    Comments are closed.

    Our Picks

    ದೆಹಲಿ ಕಾರು ಸ್ಫೋಟ ಪ್ರಕರಣ: ತುಮಕೂರಿನಲ್ಲೂ ವಿಚಾರಣೆ!

    November 14, 2025

    ಭಾರತ—ರಷ್ಯಾ ಸಂಬಂಧ ಮತ್ತಷ್ಟು ಬಲ: ಪ್ರಧಾನಿ ನರೇಂದ್ರ ಮೋದಿ

    September 25, 2025

    ದೆಹಲಿಯಲ್ಲಿ ಶಾಲೆಗಳಿಗೆ ಮತ್ತೆ ಬಾಂಬ್ ಬೆದರಿಕೆ

    September 20, 2025

    ಖ್ಯಾತ ತಮಿಳು ಹಾಸ್ಯ ನಟ ರೋಬೋ ಶಂಕರ್‌ ನಿಧನ

    September 19, 2025
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ವಿಜೃಂಭಣೆಯಿಂದ ನೆರವೇರಿದ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನ ಜಾತ್ರಾ ಮಹೋತ್ಸವ

    November 18, 2025

    ಸರಗೂರು:  ತಾಲೂಕಿನ ಬೇಲದಕುಪ್ಪೆ ಶ್ರೀಮಹದೇಶ್ವರಸ್ವಾಮಿ ದೇವಸ್ಥಾನದಲ್ಲಿ ಸೋಮವಾರ ಕಡೆಕಾರ್ತಿಕ ಮಾಸದ ಜಾತ್ರಾ ಮಹೋತ್ಸವ ಅಂಗವಾಗಿ ಕೊಂಡೋತ್ಸವ ವಿಜೃಂಭಣೆಯಿಂದ ನೆರವೇರಿತು. ಹುಲಿ…

    ಸರ್ಕಾರಿ ಶಾಲೆಗಳು ಬೇಡವಾಗಿದೆ, ಕಾರಣ ಅರಿಯಬೇಕಿದೆ: ಶಾಸಕ ಎಂ.ಟಿ.ಕೃಷ್ಣಪ್ಪ

    November 18, 2025

    ಸಾಹಿತಿಗಳು ಸರ್ಕಾರದ ಆಶ್ರಯ ಪಡೆಯುವುದನ್ನು ನಿಲ್ಲಿಸಬೇಕು: ಬಂಜಗೆರೆ ಜಯಪ್ರಕಾಶ್

    November 18, 2025

    ದುಪ್ಪಟ್ಟು ಹಣ ಲಾಭ ಗಳಿಸುವ ಆಮಿಷಕ್ಕೆ ಬಲಿಯಾಗಿ 14 ಲಕ್ಷ ರೂ. ಕಳೆದುಕೊಂಡ ಹೊಟೇಲ್ ಸಿಬ್ಬಂದಿ!

    November 18, 2025

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2025 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.