ತುರುವೇಕೆರೆ: ತಾಲೂಕಿನ ದಂಡಿನ ಶಿವರ,ಹೋಬಳಿಯ ಸಂಪಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಹಂಪಲಾಪುರ ಗ್ರಾಮದಲ್ಲಿ ಬಹಳ ದಿನಗಳಿಂದ ಕುಡಿಯುವ ನೀರಿನ ಸಮಸ್ಯೆ ಇದ್ದ ಕಾರಣ, ತುರುವೇಕೆರೆ ಕ್ಷೇತ್ರದ ಶಾಸಕರಾದ ಮಸಾಲ ಜಯರಾಮ್ ರವರು ಗ್ರಾಮಸ್ಥರ ಮನವಿಯ ಮೇರೆಗೆ ವೈಯಕ್ತಿಕವಾಗಿ ತಮ್ಮ ಸ್ವಂತ ಹಣದಲ್ಲಿ ಬೋರ್ವೆಲ್ ಕೊರೆಸಿ ಪಂಪು ಮತ್ತು ಮೋಟರುಗಳನ್ನ ಅಳವಡಿಸಿ ಗ್ರಾಮಸ್ಥರಿಗೆ ನೀರಿನ ವ್ಯವಸ್ಥೆ ಮಾಡಿದ್ದಾರೆ.
ಶಾಸಕರ ಈ ಸಾಮಾಜಿಕ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ ಗ್ರಾಮಸ್ಥರು ಶಾಸಕರು ಜನ ಪ್ರತಿನಿಧಿಗಳಿಗೆ ಮಾದರಿಯಾಗಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದು, ಶಾಸಕರಿಗೆ ಧನ್ಯವಾದಗಳನ್ನು ಸಲ್ಲಿಸಿದ್ದಾರೆ.
ಇದೇ ಸಂದರ್ಭದಲ್ಲಿ ಈ ಗ್ರಾಮದ ಮುಖಂಡರು ಹಾಗೂ ಮಹಿಳೆಯರು ಜೆಡಿಎಸ್ ಪಕ್ಷದ ಕಾರ್ಯವೈಖರಿಯಿಂದ ಬೇಸತ್ತು ಭಾರತೀಯ ಜನತಾ ಪಕ್ಷದ ಸಿದ್ಧಾಂತ ಹಾಗೂ ಶಾಸಕರಾದ ಮಸಾಲ ಜಯರಾಮ್ ರವರ ಸರಳತೆ ಹಾಗೂ ಜನಪರ ಅಭಿವೃದ್ಧಿ ಕೆಲಸಗಳ ಮೆಚ್ಚಿ ಅಧಿಕೃತವಾಗಿ ಪಕ್ಷ ಸೇರ್ಪಡೆಯಾದರು.
ವರದಿ: ಸುರೇಶ್ ಬಾಬು ಎಂ., ತುರುವೇಕೆರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1