ತುರುವೇಕೆರೆ: ತಾಲೂಕಿನ ಮಾಯಸಂದ್ರದ ದೊಡ್ಡ ಕೆರೆಯ ಕುಡಿಯುವ ನೀರಿನ ಶುದ್ಧೀಕರಣದ ಘಟಕದ ಬಳಿ ಅಂಗಾತ ಮಲಗಿರುವ ಸ್ಥಿತಿಯಲ್ಲಿ ಮಹಿಳೆಯ ಶವವೊಂದು ಪತ್ತೆಯಾಗಿದೆ.
ಮೃತ ಮಹಿಳೆ ದರ್ಶಿನಿ ಕೊಂ. ವಿನಯ್ ಸುಮಾರು 26 ವರ್ಷ ಯಲಹಂಕದ ವಾಸಿ ಎಂದು ಗುರುತಿಸಲಾಗಿದ್ದು, ಈ ಮಹಿಳೆಯ ಸಾವಿನ ಹಿಂದೆ ಅನುಮಾನವಿದ್ದು ಕಾರಣ ತಿಳಿದು ಬಂದಿರುವುದಿಲ್ಲ.
ತುರುವೇಕೆರೆ ಪೊಲೀಸ್ ಠಾಣಾ ಸಬ್ ಇನ್ಸ್ ಪೆಕ್ಟರ್ ಹೊನ್ನೇಗೌಡ ರವರ ನೇತೃತ್ವದಲ್ಲಿ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಶವವನ್ನು ನೀರಿನಿಂದ ಹೊರತೆಗೆದು ಮರಣೋತ್ತರ ಪರೀಕ್ಷೆಗಾಗಿ ತುರುವೇಕೆರೆ ತಾಲೂಕು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಸಾವಿನ ಬಗ್ಗೆ ಪ್ರಕರಣ ದಾಖಲು ಮಾಡಿಕೊಂಡು ಮುಂದಿನ ತನಿಖೆಯನ್ನು ಮುಂದುವರಿಸಿದ್ದಾರೆ.
ಈ ಪ್ರಕರಣದಲ್ಲಿ ಮಹಿಳೆಯ ಪತಿಯ ವಿಚಾರಣೆಗಾಗಿ ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ. ಈ ಸಂದರ್ಭದಲ್ಲಿ ಸಹಾಯಕ ಸಬ್ ಇನ್ಸ್ ಪೆಕ್ಟರ್ ರಾಮಚಂದ್ರಯ್ಯ, ಪೊಲೀಸ್ ಸಿಬ್ಬಂದಿ ಗಿರೀಶ್ ,ಪುನೀತ್, ಮಂಜುನಾಥ್, ಅರುಣ್, ಮೃತರ ಸಂಬಂಧಿಕರು ಸ್ಥಳದಲ್ಲಿದ್ದರು.
ವರದಿ: ಸುರೇಶ್ ಬಾಬು ಎಂ., ತುರುವೇಕೆರೆ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy