ವಿಜಯನಗರ: ಹಂಪಿ ಪ್ರವಾಸಿ ಸ್ಥಾನಗಳಲ್ಲಿ ಪ್ರಮುಖವಾಗಿದ್ದು ಇದೀಗ ಉದ್ಯಾನವನಗಳ ಅಭಿವೃದ್ಧಿಯಲ್ಲೂ ಮೇಲುಗೈ ಸಾಧಿಸುತ್ತಿದೆ. ಹಂಪಿ ಕನ್ನಡ ವಿಶ್ವವಿದ್ಯಾಲಯ ಸಮೀಪದ ಅಟಲ್ ಬಿಹಾರಿ ವಾಜಪೇಯಿ ಪ್ರಾಣಿಶಾಸ್ತ್ರೀಯ ಉದ್ಯಾನವನಕ್ಕೆ ಬಿಹಾರದಿಂದ ಆಫ್ರಿಕಾ ಮೂಲದ ಜಿರಾಫೆ ತರಲಾಗಿದ್ದು, ಸಚಿವ ಆನಂದ್ ಸಿಂಗ್ ಸಂತಸ ವ್ಯಕ್ತಪಡಿಸಿದ್ದಾರೆ.
ಮೃಗಾಲಯದ ಡಿ.ಸಿ.ಎಫ್ ಕಿರಣ್ ಕುಮಾರ್ ಅವರು ಬಿಹಾರ ಪಟ್ನಾ ಮೃಗಾಲಯದಿಂದ ಜಿರಾಫೆಯನ್ನು ತರುವಲ್ಲಿ ಆರು ತಿಂಗಳಿಂದ ಪ್ರಯತ್ನ ಪಟ್ಟಿದ್ದು. ಇಲ್ಲಿನ ಮೃಗಾಲಯದಲ್ಲಿ ಜಿರಾಫೆಗೆ ಬೇಕಾದ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಾಲ್ಕು ದಿನಗಳ ರಸ್ತೆ ಪ್ರಯಾಣದ ಮೂಲಕ ಬಿಹಾರದಿಂದ ಜಿರಾಫೆಯನ್ನು ಕರೆ ತರಲಾಗಿದೆ. 4 ವರ್ಷದ ಈ ಜಿರಾಫೆಗೆ ಮೈಸೂರು ಮೃಗಾಲಯದಿಂದ ಆಗಮಿಸುವ ಮತ್ತೊಂದು ಜಿರಾಫೆ ಜೋಡಿಯಾಗಲಿದೆ ಎಂದು ಅವರು ಮಾಹಿತಿ ನೀಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


