ಬೆಂಗಳೂರಿನಲ್ಲಿ ದ್ವಿಚಕ್ರ ವಾಹನ ಸವಾರರು ಟೋಪಿ ಮಾದರಿಯ ಅರ್ಧ ಹೆಲ್ಮೆಟ್ ಅಥವಾ ISI ಮುದ್ರೆ ಇಲ್ಲದ ಹೆಲ್ಮೆಟ್ ಧರಿಸಿದರೆ ದಂಡ ಕಟ್ಟಬೇಕಾಗುತ್ತದೆ ಎಂದು ಪೊಲೀಸರು ಅಧಿಸೂಚನೆ ಹೊರಡಿಸಿದ್ದಾರೆ.
ಕಳೆದ ಎರಡು ತಿಂಗಳಲ್ಲಿ ಹಾಫ್ ಹೆಲ್ಮೆಟ್ ಧರಿಸಿದವರೂ ಸೇರಿದಂತೆ ಹೆಲ್ಮೆಟ್ ಧರಿಸದ ಸವಾರರ ವಿರುದ್ಧ 13 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ದಾಖಲಾಗಿವೆ.
ಬೆಂಗಳೂರು ಸಂಚಾರ ಪೊಲೀಸರು ಅರ್ಧ ಹೆಲ್ಮೆಟ್ ನ್ನು ಹೆಲ್ಮೆಟ್ ರಹಿತ ಚಾಲನೆ ಎಂದೇ ಪರಿಗಣಿಸಿ ದಂಡ ವಿಧಿಸುತ್ತಿದ್ದಾರೆ. ಮೋಟಾರು ವಾಹನ ನಿಯಮಗಳ 1989 ನಿಯಮ 230(1) ಕ್ಕೆ ತಿದ್ದುಪಡಿಯಲ್ಲಿ ರಾಜ್ಯವ್ಯಾಪಿ ಬೈಕ್ ಸವಾರ ಮತ್ತು ಹಿಂಬದಿ ಸವಾರರು ಐಎಸ್ ಐ ಮುದ್ರೆಯ ಹೆಲ್ಮೆಟ್ ಧರಿಸುವುದನ್ನು ಕಡ್ಡಾಯ ಮಾಡಿ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


