ಮಂಡ್ಯ: ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಕೂಲಿ ಕಾರ್ಮಿಕನ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಮಂಡ್ಯ ಜಿಲ್ಲೆ ಕೆ.ಆರ್ ಪೇಟೆ ತಾಲ್ಲೂಕಿನ ರಾಯಸಮುದ್ರ ಗ್ರಾಮದಲ್ಲಿ ನಡೆದಿದೆ.
ಶಿವಮೊಗ್ಗ ಜಿಲ್ಲೆ ಭದ್ರಾವತಿ ಮೂಲದ ಜಯರಾಮ್ ಚಿರತೆ ದಾಳಿಗೆ ತುತ್ತಾದವರು. ಕಬ್ಬು ಕಟಾವು ಮಾಡುತ್ತಿದ್ದ ವೇಳೆ ಜಯರಾಮ್ ಮೇಲೆ ಚಿರತೆ ದಾಳಿ ನಡೆಸಿದ್ದು, ಈ ವೇಳೆ ಜಯರಾಮ್ ಗಂಭೀರ ಗಾಯಗೊಂಡಿದ್ದಾರೆ.
ನಂತರ ಜಯರಾಮ್ ಅವರನ್ನ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಚಿರತೆ ದಾಳಿ ಹಿನ್ನೆಲೆ ರಾಯಸಮುದ್ರ ಗ್ರಾಮದ ಜನರಿಗೆ ಆತಂಕ ಎದುರಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


