nammatumakuru

    Subscribe to Updates

    Get the latest creative news from FooBar about art, design and business.

    What's Hot

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026
    Facebook Twitter Instagram
    ಟ್ರೆಂಡಿಂಗ್
    • ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ
    • ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ
    • ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ
    • ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ
    • ಸರಗೂರು ತಾಲೂಕಿನ ವಿವಿಧ ಗ್ರಾಮಗಳಲ್ಲಿ ₹3.5 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಅನಿಲ್ ಚಿಕ್ಕಮಾದು ಚಾಲನೆ
    • ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!
    • ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ
    • ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕೊಳಗೇರಿ ಪ್ರದೇಶಗಳಲ್ಲಿರುವಂತಹ ೧೭೨ ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳನ್ನಾಗಿ ಪರಿವರ್ತಿಸಲು ಸಿದ್ಧತೆ
    ರಾಜ್ಯ ಸುದ್ದಿ January 31, 2023

    ಕೊಳಗೇರಿ ಪ್ರದೇಶಗಳಲ್ಲಿರುವಂತಹ ೧೭೨ ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳನ್ನಾಗಿ ಪರಿವರ್ತಿಸಲು ಸಿದ್ಧತೆ

    By adminJanuary 31, 2023No Comments2 Mins Read
    digital grantalaya

    ಡಿಜಿಟಲ್ ಗ್ರಂಥಾಲಯಗಳ ಯೋಜನೆಗೆ ದೊರೆತಂತಹ ಪ್ರತಿಕ್ರಿಯೆಯಿಂದ ಪ್ರೇರಣೆಗೊಂಡಿರುವ ಗ್ರಂಥಾಲಯಗಳ ಇಲಾಖೆಯು, ಅಂದಾಜು ರೂ.೪ ಕೋಟಿ ಮೊತ್ತದಲ್ಲಿ ರಾಜ್ಯದಾದ್ಯಂತ ಗ್ರಾಮೀಣ ಪ್ರದೇಶಗಳು ಹಾಗೂ ಕೊಳಗೇರಿ ಪ್ರದೇಶಗಳಲ್ಲಿರುವಂತಹ ೧೭೨ ಗ್ರಂಥಾಲಯಗಳನ್ನು ಡಿಜಿಟಲ್ ಗ್ರಂಥಾಲಯಗಳನ್ನಾಗಿ ಪರಿವರ್ತಿಸಲು ಸಿದ್ಧತೆ ನಡೆಸಿದೆ.

    ಮೊದಲ ಹಂತದಲ್ಲಿ ರಾಜ್ಯದ ೨೭೨ ಗ್ರಂಥಾಲಯಗಳನ್ನು ಡಿಜಿಟಿಲ್ ಗ್ರಂಥಾಲಯಗಳನ್ನಾಗಿ ಪರಿವರ್ತಿಸಲಾಗಿತ್ತು. ನಂತರ ಎರಡನೇ ಹಂತದಲ್ಲಿ ೧೦೦ ಗ್ರಂಥಾಲಯಗಳು ಪರಿವರ್ತನೆಗೊಂಡಿದ್ದವು. ಈಗ ಮೂರನೇ ಹಂತದಲ್ಲಿ ಇಲಾಖೆಯು ಗ್ರಾಮೀಣ ಪ್ರದೇಶಗಳ ಕಡೆ ಗಮನ ಹರಿಸಿದೆ.

    ಈ ಯೋಜನೆಯನ್ನು 2020ರಲ್ಲಿ ಜಾರಿಗೊಳಿಸಲಾಯಿತು. ಪ್ರಸ್ತುತ ಅಂದರೆ ೨ ವರ್ಷ, ೧೦ ತಿಂಗಳಲ್ಲಿ ೩.೨೧ ಕೋಟಿ ಚಂದಾದಾರರಿದ್ದು, ೧.೭೩ ಕೋಟಿಯಷ್ಟು ಇ-ಕಂಟೆಂಟ್ (ವಿಷಯವಸ್ತು) ಅನ್ನು ಯಶಸ್ವಿಯಾಗಿ ಸೇರ್ಪಡೆಗೊಳಿಸಲಾಗಿದೆ.

    “ಕರ್ನಾಟಕಕ್ಕೆ ಆರಂಭದಲ್ಲಿ ನೀಡಿದ್ದಂತಹ ಗುರಿ ಕನಿಷ್ಠ ೧೦ ಲಕ್ಷ ಚಂದಾದಾರರು. ಆದರೆ, ನಮಗೆ ಸಿಕ್ಕಂತಹ ಪ್ರತಿಕ್ರಿಯೆ ಅದ್ವಿತೀಯವಾಗಿತ್ತು, ಎಲ್ಲಾ ದಾಖಲೆಗಳನ್ನೂ ಮುರಿಯಿತು. ಇದು ನಮಗೆ ಇನ್ನೂ ಹೆಚ್ಚಿನ ಸಂಖ್ಯೆಯ ಗ್ರಂಥಾಲಯಗಳನ್ನು ಡಿಜಿಟಲ್‌ ಗೆ ಪರಿವರ್ತಿಸಲು ಪ್ರೇರೇಪಿಸಿದೆ,” ಎಂದು ಗ್ರಂಥಾಲಯಗಳ ಇಲಾಖೆಯ ನಿರ್ದೇಶಕ ಸತೀಶ್ ಕುಮಾರ್ ಎಸ್. ಹೊಸಮನಿ ಮಾಧ್ಯಮಕ್ಕೆ ತಿಳಿಸಿದ್ದಾರೆ.

    ಇಲಾಖೆಯು, ಬಳಕೆದಾರರಿಗೆ ದೂರದಿಂದಲೇ ವಿಷಯವಸ್ತುವನ್ನು ಪಡೆಯಲು ಅನುಕೂಲ ಮಾಡಿಕೊಡಲು https://www.karnatakadigitalpubliclibrary.org/ಪೋರ್ಟಲ್ ಅನ್ನು ಅಭಿವೃದ್ಧಿಪಡಿಸಿದೆ, ಹಾಗೂ ಡಿಜಿಟಲ್ ರೂಪದ ಗ್ರಂಥಾಲಯಗಳ ಸೌಲಭ್ಯರಹಿತರಿಗಾಗಿ ಗ್ರಂಥಾಲಯಗಳನ್ನು ಗಣಕಯಂತ್ರಗಳು ಹಾಗೂ ಲ್ಯಾಪ್‌ ಟಾಪ್‌ಗಳೊಂದಿಗೆ ಉನ್ನತೀಕರಿಸಿದೆ.

    ನಾವು ಎಲ್ಲಾ ವಿಷಯವಸ್ತುವನ್ನೂ ಸಹ ಕ್ಲೌಡ್‌ನಲ್ಲಿ ಪೊಸ್ಟ್ ಮಾಡುತ್ತೇವೆ ಹಾಗೂ ಉಪಕರಣಗಳನ್ನು ಖರೀದಿಸುವುದು ಸಾಧ್ಯವಾಗದಿರುವಂತಹವರಿಗಾಗಿ, ಪರಿವರ್ತಿಸಿಲಾಗಿರುವಂತಹ ಗ್ರಂಥಾಲಯಗಳಲ್ಲಿ ಲ್ಯಾಪ್‌ ಟಾಪ್‌ ಗಳು ಹಾಗೂ ಇಂಟರ್‌ ನೆಟ್ ಸಂಪರ್ಕವನ್ನು ಕಲ್ಪಿಸುತ್ತಿದ್ದೇವೆ,” ಎಂದು ಹೊಸಮನಿ ವಿವರಿಸಿದರು.

    ಈ ವಿಷಯವಸ್ತು ಇ-ಪುಸ್ತಕಗಳು, ನಿಯತಕಾಲಿಕೆಗಲು, ಹಾಗೂ ವೀಡಿಯೋಗಳ ರೂಪದಲ್ಲಿ ಲಭ್ಯವಿದ್ದು, ಕನ್ನಡ, ಇಂಗ್ಲೀಷ್, ತಮಿಳು, ತೆಲುಗು ಹಾಗೂ ಇನ್ನಿತರೆ ಭಾಷೆಗಳಲ್ಲಿ ದೊರೆಯುತ್ತವೆ.

    ಮುಂದುವರೆಯುತ್ತಾ ಹೊಸಮನಿ ಅವರು, ನಮ್ಮ ಈ ಉಪಕ್ರಮವು ಅನೇಕ ಪ್ರಕಾಶಕರು, ಸಂಪಾದಕರನ್ನು ಆಕರ್ಷಿಸಿದ್ದು, ಅವರು ಸ್ವಯಂಪ್ರೇರಿತವಾಗಿ ಡಿಜಿಟಲ್ ಮಾದರಿಯಲ್ಲಿ ಬಳಸಲು ಪುಸ್ತಕಗಳನ್ನು ದಾನ ನೀಡುತ್ತಿದ್ದಾರೆ. ಈ ಹೊಸ ರೂಪದ ಗ್ರಂಥಾಲಯ, ಅನೇಕರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧವಾಗಲು ಬಹಳ ನೆರವಾಗಿವೆ ಎಂದಿದ್ದಾರೆ.

    ಡಿಜಿಟಲ್ ಗ್ರಂಥಾಲಯಗಳಿಗೆ ಸಾರ್ವಜನಿಕರಿಂದ ಅದ್ಭುತ ಪ್ರತಿಕ್ರಿಯೆ ದೊರೆತಿದ್ದರೂ ಸಹ ಅಗತ್ಯ ಹಣ ಇನ್ನೂ ಒಂದು ಕಾಳಜಿಯಾಗಿದೆ. “ಸಾಂಪ್ರದಾಯಿಕ ಗ್ರಂಥಾಲಯಗಳನ್ನು ಡಿಜಿಟಲ್ ರೂಪಕ್ಕೆ ಪರಿವರ್ತಿಸುವುದು ಬಂಡವಾಳದ ಅಗತ್ಯವಿರುವಂತಹ ಯೋಜನೆಯಾಗಿದೆ. ಪ್ರಸ್ತುತ ಬಹುಪಾಲು ಕೆಲಸಗಳನ್ನು ಭಾರತ ಸರ್ಕಾರ ಹಾಗೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ (ಆರ್‌ಡಿಪಿಆರ್) ಇಲಾಖೆಯಡಿ ಲಭ್ಯವಾಗುತ್ತಿರುವ ಹಣದಲ್ಲಿ ಪೂರೈಸಲಾಗುತ್ತಿದೆ,” ಎಂದು ಗ್ರಂಥಾಲಯಗಳ ಇಲಾಖೆಯ ಹಿರಿಯ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.


    ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.

    ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy

    admin
    • Website

    Related Posts

    ಸಚಿವ ಈಶ್ವರ ಖಂಡ್ರೆ ಆಗಮನ ವೇಳೆ ಗದ್ದಲ: ಮುಜುಗರದಿಂದ ಪ್ರವಚನ ಅರ್ಧಕ್ಕೇ ನಿಲ್ಲಿಸಿ ವೇದಿಕೆಯಿಂದ ನಿರ್ಗಮಿಸಿದ ಶ್ರೀ ಗವಿಸಿದ್ಧೇಶ್ವರ ಸ್ವಾಮೀಜಿ!

    August 12, 2026

    ನೂತನ ಸಚಿವರಿಗೆ ಸರ್ಕಾರಿ ನಿವಾಸ ಹಾಗೂ ಕಾರು ಹಂಚಿಕೆ: ಡಿಪಿಎಆರ್ ಆದೇಶ

    August 12, 2026

    ಆಗಸ್ಟ್ 14 ರಂದು ಕರ್ನಾಟಕ ವಿಧಾನಸಭೆಗೆ ಹೊಸ ಸ್ಪೀಕರ್ ಆಯ್ಕೆ

    August 12, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ಸ್ವಾತಂತ್ರ್ಯ ದಿನಾಚರಣೆ : ಆ.14ರಂದು ವಿವಿಧ ಸ್ಪರ್ಧೆ

    August 12, 2026

    ತುಮಕೂರು: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಜಿಲ್ಲಾ ಬಾಲಭವನ ಸಮಿತಿ ವತಿಯಿಂದ ಆಗಸ್ಟ್ 14ರಂದು ಬೆಳಿಗ್ಗೆ 11 ಗಂಟೆಗೆ 5 ರಿಂದ…

    ಗುಬ್ಬಿ: ಆ.17ರಿಂದ22ರವರೆಗೆ  ಕೇರಳದ ಸಮರ ಕಲೆ ಕಲರಿಪಯಟ್ಟು ಶಿಬಿರ

    August 12, 2026

    ಆಟೋ ಹಾಗೂ ಟ್ಯಾಂಕರ್ ಡಿಕ್ಕಿ: ಆರು ಜನ ಕೂಲಿ ಕಾರ್ಮಿಕರ ದಾರುಣ ಸಾವು; ಸಚಿವ ಈಶ್ವರ ಖಂಡ್ರೆ ಸಂತಾಪ

    August 12, 2026

    ತುಮಕೂರು: ಮಹಾನ್ ಕ್ರಾಂತಿಕಾರಿ ಖುದಿರಾಮ್ ಬೋಸ್ 118ನೇ ಹುತಾತ್ಮ ದಿನಾಚರಣೆ – ಎಐಡಿಎಸ್ ಒ ವತಿಯಿಂದ ಶ್ರದ್ಧಾಂಜಲಿ

    August 12, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.