ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಅವರು ಇಂದು ಬಜೆಟ್ ಮಂಡಿಸಲಿದ್ದು, ಈ ಹಿನ್ನೆಲೆಯಲ್ಲಿ ಸಂಪ್ರದಾಯದಂತೆ ಇಂದು ಮುಂಜಾನೆ ರಾಷ್ಟ್ರಪತಿಗಳನ್ನು ಭೇಟಿ ಮಾಡಿದರು.
ರಾಷ್ಟ್ರಪತಿ ಮುರ್ಮು ಅವರನ್ನು ಭೇಟಿ ಮಾಡಿದ ನಿರ್ಮಲ ಸೀತಾರಾಮನ್ ಬಜೆಟ್ ಮಂಡನೆಗೆ ಅಂಕಿತ ಪಡೆದುಕೊಂಡಿದ್ದಾರೆ. ಇಂದು ಬೆಳಗ್ಗೆ 11 ಗಂಟೆಗೆ ನಿರ್ಮಲ ಸೀತಾರಾಮನ್ ಲೋಕಸಭೆಯಲ್ಲಿ ಬಜೆಟ್ ಮಂಡಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಅವಧಿಯ ಕೊನೆಯ ಬಜೆಟ್ ಇದಾಗಿದ್ದು, ಈ ಬಜೆಟ್ ಬಗ್ಗೆ ಸಾಕಷ್ಟು ನಿರೀಕ್ಷೆಗಳನ್ನು ಹೊಂದಲಾಗಿದೆ. ಕೇಂದ್ರ ಸರ್ಕಾರ ದೇಶದ ಜನತೆಯ ಮೇಲಿರುವ ತೆರಿಗೆ ಹೊರೆ ಸೇರಿದಂತೆ ಹಲವು ರೀತಿಯ ಬೆಲೆ ಏರಿಕೆಗಳನ್ನು ಇಳಿಸುವ ನಿರೀಕ್ಷೆ ಇದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


