ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ರಾಷ್ಟ್ರಗೀತೆಯನ್ನು ಹೇಳುವಾಗ ಕುರ್ಚಿ ಮೇಲೆ ಕುಳಿತುಕೊಂಡು ಫೋನ್‌ನಲ್ಲಿ ಮಾತನಾಡಿದ್ದಕ್ಕೆ ಪೊಲೀಸ್ ಅಧಿಕಾರಿಯೊಬ್ಬರನ್ನು ಅಮಾನತು ಮಾಡಲಾಗಿದೆ.
ತಮಿಳುನಾಡಿನ ನಾಮಕ್ಕಲ್ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಸಬ್ ಇನ್ಸ್ ಪೆಕ್ಟರ್ ಶಿವಪ್ರಕಾಶ್ ಅವರನ್ನು ಅಮಾನತು ಮಾಡಲಾಗಿದೆ.
ಕಾರ್ಯಕ್ರಮದಲ್ಲಿ ಯುವ ಕಲ್ಯಾಣ ಮತ್ತು ಕ್ರೀಡಾ ಅಭಿವೃದ್ಧಿ ಸಚಿವ ಉದಯನಿಧಿ ಸ್ಟಾಲಿನ್ ಅವರು ಹಲವಾರು ಫಲಾನುಭವಿಗಳಿಗೆ ಸಹಾಯಧನ ವಿತರಿಸಿದರು. ಇನ್ನೂ ಇದೇ ಕಾರ್ಯಕ್ರಮದಲ್ಲಿ ಪೊಲೀಸ್ ಅಧಿಕಾರಿ ರಾಷ್ಟ್ರಗೀತೆಯನ್ನು ಹೇಳುವಾಗ ಕುರ್ಚಿ ಮೇಲೆ ಕುಳಿತುಕೊಂಡು ಫೋನ್‌ನಲ್ಲಿ ಮಾತನಾಡಿದರು ಎನ್ನಲಾಗಿದೆ.
ಇನ್ನೂ ಈ ಕುರಿತು ವಿಚಾರಣೆ ಆಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


