ರಾಜ್ಯ ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ, ಮತದಾರರಿಗೆ ಆಮಿಷ ಒಡ್ಡುವ ರಾಜಕಾರಣಿಗಳ ದುಷ್ಕೃತ್ಯಗಳಿಗೆ ಕಡಿವಾಣ ಹಾಕುವಂತೆ ಸರ್ಕಾರಕ್ಕೆ ಕೆ.ಆರ್.ಎಸ್ ಪಕ್ಷ ಆಗ್ರಹಿಸಿದೆ.
ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರ ಮತ್ತು ರಾಜ್ಯ ಮುಖ್ಯ ಚುನಾವಣಾಧಿಕಾರಿಗಳಿಗೆ ಕೆಆರ್ ಎಸ್ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣರೆಡ್ಡಿ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ರಾಜ್ಯದಲ್ಲಿ ಇನ್ನೇನು ಕೆಲವೇ ತಿಂಗಳಲ್ಲಿ ಚುನಾವಣೆ ಬರಲಿದೆ. ಈ ವೇಳೆ ಗಂಡಸರಿಗೆ ಲಿಕ್ಕರ್,ಹೆಂಗಸರಿಗೆ ಕುಕ್ಕರ್, ಹಣದಂತಹ ಆಮಿಷಗಳು ಬರಲಿವೆ. ಇಂತಹ ಆಮಿಷಗಳನ್ನ ಒಡ್ಡುವ ಅಭ್ಯರ್ಥಿಗಳ ವಿರುದ್ಧ ಸೂಕ್ತ ಕ್ರಮ ಜರುಗಿಸಬೇಕು. ಮತದಾರರು ಯಾವುದೇ ಆಮಿಷಗಳಿಗೆ ಒಳಗಾಗಬಾರದು ಎಂದು ಮನವಿ ಮಾಡಿದರು.ಇದೇ ವೇಳೆ ಸಮಾಜದ ವ್ಯವಸ್ಥೆ ಬಗ್ಗೆ ರವಿ ಕೃಷ್ಣರೆಡ್ಡಿ ಅಸಮಾಧಾನ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


