157 ಹೊಸ ನರ್ಸಿಂಗ್ ಕಾಲೇಜುಗಳ ಸ್ಥಾಪನೆ ಮಾಡುವುದಾಗಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬುಧವಾರ ಮಂಡಿಸಿರುವ ಬಜೆಟ್ ನಲ್ಲಿ ಘೋಷಿಸಿದ್ದಾರೆ.
ಈ ಬಾರಿಯ ಕೇಂದ್ರ ಬಜೆಟ್ ಲ್ಲಿ ಶಿಕ್ಷಣ ಕ್ಷೇತ್ರ ಕ್ಕೂ ಹೆಚ್ಚಿನ ಮಹತ್ವವನ್ನು ನೀಡಲಾಗಿದೆ. ಮಹಾಮಾರಿ ಕೊರೊನಾ ನಂತರ ಶಿಕ್ಷಣ ಕ್ಷೇತ್ರ ಚೇತರಿಸಿಕೊಳ್ಳಲು ಬೇಕಾದ ಕೆಲವು ಅಗತ್ಯ ಅಂಶಗಳನ್ನು ಈ ಬಾರಿ ಬಜೆಟ್ ನಲ್ಲಿ ನೀಡಲಾಗಿದೆ ಎಂದು ಅವರು ತಿಳಿಸಿದರು.
2014 ರಿಂದ ಸ್ಥಾಪಿತವಾಗಿರುವ ಅಸ್ತಿತ್ವದಲ್ಲಿರುವ 157 ವೈದ್ಯಕೀಯ ಕಾಲೇಜುಗಳೊಂದಿಗೆ 157 ಹೊಸ ನರ್ಸಿಂಗ್ ಕಾಲೇಜುಗಳನ್ನು ಸ್ಥಾಪಿಸಲಾಗುವುದು ಎಂದು ಇದೇ ವೇಳೆ ಅವರು ಘೋಷಿಸಿದರು.
ಮಕ್ಕಳು ಮತ್ತು ಹದಿಹರೆಯದವರಿಗಾಗಿ ರಾಷ್ಟ್ರೀಯ ಡಿಜಿಟಲ್ ಲೈಬ್ರರಿಯನ್ನು ಸ್ಥಾಪಿಸಲಾಗುವುದು. ಈ ಗ್ರಂಥಾಲಯಗಳಲ್ಲಿ ಭೌಗೋಳಿಕತೆ, ಭಾಷೆಗಳ ಪ್ರಕಾರಗಳನ್ನು ಆಧರಿಸಿ ಗುಣಮಟ್ಟದ ಪುಸ್ತಕಗಳು ಲಭ್ಯವಿರಲಿವೆ ಎಂದು ಇದೇ ವೇಳೆ ನಿರ್ಮಲಾ ತಿಳಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


