ಬೆಳಗಾವಿ: ಚುನಾವಣೆ ಸಮೀಪಿಸುತ್ತಿರುವ ಬೆನ್ನಲ್ಲೆ ಅಧಿಕಾರಿಗಳ ವರ್ಗಾವಣೆ ಮಿಂಚಿನ ವೇಗದಲ್ಲಿ ನಡೆದಿದ್ದು ಬೆಳಗಾವಿಯ ಕೆಲವು ಇಲಾಖೆಯ ಅಧಿಕಾರಿಗಳನ್ನು ಬುಧವಾರ ವರ್ಗಾವಣೆ ಮಾಡಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಆದೇಶ ಹೊರಡಿಸಿದೆ.
ಬೆಳಗಾವಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಹಿನ್ನೆಲೆಯಲ್ಲಿಈ ಅಧಿಕಾರಿಗಳನ್ನು ಸ್ವಂತ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದ್ದು ಅಪರ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ವರ್ಗಾವಣೆ ಆಗಿದ್ದು, ಬೆಳಗಾವಿ ಎಡಿಸಿ ಆಗಿ ಕೆ. ಟಿ. ಶಾಂತಲಾ ನೇಮಕವಾಗಿದ್ದಾರೆ. ಹೆಚ್ಚುವರಿ ಪ್ರಾದೇಶಿಕ ಆಯುಕ್ತರಾಗಿ ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದ ರವೀಂದ್ರ ಕರಲಿಂಗಣ್ಣವರ ಅವರನ್ನು ರಾಯಚೂರು ಎಡಿಸಿಯಾಗಿ ವರ್ಗಾಯಿಸಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


