ಪಾವಗಡ: ಕೆಎಸ್ ಆರ್ ಟಿಸಿ ಬಸ್ ವೊಂದು ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ ಘಟನೆ ಪಾವಗಡ ತಾಲೂಕಿನ ವೈ ಎನ್ ಹೊಸಕೋಟೆ ಹೋಬಳಿಯ ಬೂದಿ ಬೆಟ್ಟ ಗ್ರಾಮದ ಸಮೀಪ ಬುಧವಾರ ನಡೆದಿದೆ.
ವೈ ಎನ್ ಹೊಸಕೋಟೆ ದಿಂದ ಪಾವಗಡಕ್ಕೇ ಮಾರ್ಗವಾಗಿ ಸಂಚರಿಸುತ್ತಿದ್ದ ಬಸ್ ಏಕಾಏಕಿ ಚಾಲಕನ ನಿಯಂತ್ರಣ ತಪ್ಪಿ ಹಳ್ಳಕ್ಕೆ ನುಗ್ಗಿದ್ದು, ಅದೃಷ್ಟವಶಾತ್ ಅಪಘಾತದಲ್ಲಿ ಯಾರಿಗೂ ಪ್ರಾಣಾಪಾಯ ಸಂಭವಿಸಿಲ್ಲ.
ಬಸ್ ನಲ್ಲಿದ್ದ ಕೆಲವು ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಅವರನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಸ್ಥಳೀಯ ಯುವಕರು ದಾಖಲಿಸಿದ್ದಾರೆ.
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1