ನವದೆಹಲಿ: ಸಿಡಿ ಪ್ರಕರಣಕ್ಕೊಂದು ಅಂತ್ಯ ಹಾಡಲು ನಿರ್ಧರಿಸಿರುವ ರಮೇಶ್ ಜಾರಕಿಹೊಳಿ ನಿನ್ನೆ ತಡರಾತ್ರಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ. ಅವರ ಜೊತೆ ಮಾತನಾಡಿರುವ ಅಮಿತ್ ಶಾ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ ಎಂದು ತಿಳಿದು ಬಂದಿದ್ದುಇನ್ನು ಎರಡು ದಿನ ನವದೆಹಲಿಯಲ್ಲಿ ರಮೇಶ್ ಜಾರಕಿಹೊಳಿ ಇರಲಿದ್ದಾರೆ ಎಂದು ಹೇಳಲಾಗುತ್ತಿದೆ.
ಅಮಿತ್ ಶಾ ಭೇಟಿ ವೇಳೆ ರಮೇಶ್ ಜಾರಕಿಹೊಳಿ ಅವರಿಗೆ ರಾಜ್ಯ ನಾಯಕರು ಸಾಥ್ ನೀಡಿದ್ದಾರೆ. ಸುಮಾರು 20 ನಿಮಿಷ ಮಾತುಕತೆ ನಡೆಸಿರುವ ರಮೇಶ್ ಜಾರಕಿಹೊಳಿ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಹ ನೀಡುತ್ತೇನೆ. ಹಾಗಾಗಿ ಪ್ರಕರಣವನ್ನು ಸಿಬಿಐ ತನಿಖೆಗೆ ನೀಡಬೇಕೆಂದು ಮನವಿ ಮಾಡಿಕೊಂಡಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


