ರಾಯಚೂರು ಜಿಲ್ಲೆ ಲಿಂಗಸೂಗೂರು ಪಟ್ಟಣದ ವಿಸಿಬಿ ಕಾಲೇಜಿನಲ್ಲಿ ಕ್ಲಾಸ್ ಅರ್ಧಕ್ಕೆ ಬಿಟ್ಟು ಹಾಸ್ಟೆಲ್‌ಗೆ (Hostel) ಬಂದು ಫ್ಯಾನ್‌ಗೆ ನೇಣು ಹಾಕಿಕೊಂಡು ವಿದ್ಯಾರ್ಥಿನಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ ಲಿಂಗಸೂಗೂರು ತಾಲೂಕಿನ ಗೋನವಾಟ್ಲ ತಾಂಡಾದ ಐಶ್ವರ್ಯ (18) ಎಂದು ತಿಳಿದು ಬಂದಿದೆ.
ಲಿಂಗಸೂಗೂರು ವಿಶ್ವೇಶ್ವರ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅಭ್ಯಾಸ ಮಾಡುತ್ತಿದ್ದ ಐಶ್ವರ್ಯ ಆತ್ಮಹತ್ಯೆಗೆ (Suicide) ಪ್ರಾಂಶುಪಾಲರೇ ಕಾರಣ ಎಂದು ವಿದ್ಯಾರ್ಥಿನಿ ಪೋಷಕರು ಆರೋಪ ಮಾಡಿದ್ದಾರೆ.
ಇನ್ನೂ ವಿದ್ಯಾರ್ಥಿನಿ ಮಧ್ಯಾಹ್ನ ಆತ್ಮಹತ್ಯೆ ಮಾಡಿಕೊಂಡಿದ್ದರೂ ಇದುವರೆಗೂ ಮೃತದೇಹ ತೆಗೆಯಲು ಪೋಷಕರು ಬಿಡದೆ ವಸತಿ ಶಾಲೆಗೆ ಮುತ್ತಿಗೆ ಹಾಕಿ ಆಕ್ರೋಶವನ್ನು ವ್ಯಕ್ತಪಡಿಸಿದ್ದಾರೆ.ಅಲ್ಲದೇ ಪ್ರಾಂಶುಪಾಲರು ಬರೋ ತನಕ ಮೃತದೇಹ ತೆಗೆಯಲು ಬಿಡಲ್ಲ ಎಂದು ಪೋಷಕರು ಹಾಗೂ ಸಂಬಂಧಿಕರು ರಾತ್ರಿಯ ತನಕ ಪಟ್ಟು ಹಿಡಿದಿದ್ದಾರೆ.
ಸದ್ಯ ಮಾಹಿತಿ ತಿಳಿದು ಸ್ಥಳಕ್ಕೆ ಬಂದ ಲಿಂಗಸೂಗೂರು ಪೊಲೀಸರು ಮೃತದೇಹವನ್ನು ಆಸ್ಪತ್ರೆಗೆ ರವಾನಿಸಿ ಕಾಲೇಜು ಆಡಳಿತ ಮಂಡಳಿ ಜೊತೆಗೆ ಚರ್ಚೆ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಇನ್ನು ಲಿಂಗಸೂಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


