ವಿಜಯಪುರ: ಕಳೆದ ಎರಡು ವರ್ಷಗಳಿಂದ ವಿಜಯಪುರ ಜಿಲ್ಲೆಯ ಗಡಿ ಭಾಗಗಳಲ್ಲಿ ಭೂಕಂಪನದ ಅನುಭವ ಉಂಟಾಗುತ್ತಿದೆ ಎಂದು ಜನರು ಹೇಳುತ್ತಿರುವ ಬೆನ್ನಲ್ಲೇ ಗುರುವಾರ ಭೂಕಂಪನದ ಅನುಭವ ಉಂಟಾಗಿದೆ.
ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಘೋಣಸಗಿ, ಕಳ್ಳಕವಟಗಿ, ಹುಬನೂರ. ಟಕ್ಕಳಕಿ, ಸಿದ್ದಾಪುರ ಕೆ. ಗ್ರಾಮದಲ್ಲಿ ಭೂಮಿ ಕಂಪಿಸಿದೆ ಎಂದು ಜನರು ಹೇಳುತ್ತಿದ್ದಾರೆ.
ಕರ್ನಾಟಕದ ಗಡಿ ಹಾಗೂ ಮಹಾರಾಷ್ಟ್ರದ ಬಿವರಗಿ, ಮೊರಬಗಿ ಗ್ರಾಮದ ಸುತ್ತಮುತ್ತ ಸಹ ಭೂಮಿ ಕಂಪಿಸಿದ ಅನುಭವ ಆಗಿದೆ ಎಂದು ತಿಳಿದು ಬಂದಿದೆ. ಗುರುವಾರ ರಾತ್ರಿ 10.05 ಮತ್ತು ಇಂದು ಬೆಳಗಿನ ಜಾವ 1.47ಕ್ಕೆ ಭೂಮಿ ಕಂಪಿಸಿದ್ದು, ರಿಕ್ಟರ್ ಮಾಪಕದಲ್ಲಿ 2.7 ರಷ್ಟು ತೀವ್ರತೆ ದಾಖಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


