ಹುಬ್ಬಳ್ಳಿ: ಮೂರು ಮಕ್ಕಳ ತಂದೆಯೊಬ್ಬ 17 ವರ್ಷದ ಅಪ್ರಾಪ್ತೆಯನ್ನು ಮದುವೆಯಾದ ಘಟನೆ ಹುಬ್ಬಳ್ಳಿಯ ಅಶೋಕ ನಗರ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ನಡೆದಿದೆ. ಆರೋಪಿ ಹನುಮಂತ ಉಪ್ಪಾರ ಈಗಾಗಲೇ ಮದುವೆಯಾಗಿ ಮೂರು ಮಕ್ಕಳಿದ್ದರೂ ಈಗ ಅಪ್ರಾಪ್ತ ಬಾಲಕಿಯೊಂದಿಗೆ ಎರಡನೇ ಮದುವೆಯಾಗಿದ್ದಾನೆ. ಎಂದು ಫೋಟೋಗಳ ಸಮೇತ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಹನುಮಂತ ಉಪ್ಪಾರ ಹುಬ್ಬಳ್ಳಿಯ ಮಹದೇವ ನಗರದ ನಿವಾಸಿಯಾಗಿದ್ದು, ನೇತ್ರಾ ಎಂಬಾಕೆಯನ್ನು ಕೆಲ ವರ್ಷಗಳ ಹಿಂದೆ ಮದುವೆಯಾಗಿದ್ದ. ಇಬ್ಬರಿಗೂ ಮೂರು ಮಕ್ಕಳು ಕೂಡ ಜನಿಸಿದ್ದಾರೆ. ಆದರೆ ಈಗ ಆರೋಪಿ ಮೊದಲ ಪತ್ನಿ ನೇತ್ರಾ ಅವರನ್ನು ಬಿಟ್ಟು ಮತ್ತೊಂದು ಮದುವೆಯಾಗಿದ್ದಾನೆ. ಅದರಲ್ಲೂ 17 ವರ್ಷದ ಅಪ್ರಾಪ್ತ ಬಾಲಕಿಯನ್ನು ಆರೋಪಿ ಮದುವೆಯಾಗಿದ್ದು, ಆಕೆಗೆ ಹಣದ ಆಮಿಷ ತೋರಿಸಿ ದೇವಸ್ಥಾನವೊಂದರಲ್ಲಿ ಮದುವೆಯಾಗಿದ್ದಾನೆ ಎಂದು ಮೊದಲ ಪತ್ನಿ ಆರೋಪಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


