ಪಾವಗಡ: ಪಟ್ಟಣದ ಸಾರ್ವಜನಿಕ ಆಸ್ಪತ್ರೆ ಮುಂಭಾಗದಲ್ಲಿ ಗುರುವಾರ ಬೆಳಿಗ್ಗೆ ಅಪರಿಚಿತ ಗಂಡಸಿನ ಮೃತದೇಹವೊಂದು ಪತ್ತೆಯಾಗಿರುವ ಘಟನೆ ನಡೆದಿದೆ.
ಸುಮಾರು 40 ವರ್ಷ ವಯಸ್ಸಿನ ಈ ವ್ಯಕ್ತಿ ಪಟ್ಟಣದಲ್ಲಿ ಭಿಕ್ಷುಕನಂತೆ ಕಂಡು ಬಂದಿದ್ದ ಎಂದು ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಗೋಧಿ ಬಣ್ಣ ದುಂಡುಮುಖ, ಸಾಧಾರಣ ಶರೀರ, ಕಪ್ಪು ಮಿಶ್ರಿತ ಬಿಳಿ ಕೂದಲು, ನೀಲಿ ಕಪ್ಪು ಮಿಶ್ರಿತ ಅಂಗಿ, ಸಿಮೆಂಟ್ ಕಲರ್ ಲುಂಗಿ, ಕಂದು ಬಣ್ಣದ ಡ್ರಾಯರ್ ಧರಿಸಿರುವ ಈ ವ್ಯಕ್ತಿ ಅಪರಿಚಿತನಾಗಿದ್ದಾನೆ.
ಈ ವ್ಯಕ್ತಿಯ ವಾರಸುದಾರರು ತಿಳಿದವರು ಯಾರಾದರೂ ಇದ್ದರೆ ಕೂಡಲೇ ಪಾವಗಡ ಪೊಲೀಸ್ ಠಾಣೆಗೆ ಮಾಹಿತಿ ನೀಡಿ ಎಂದು ಪಟ್ಟಣ ಪೊಲೀಸ್ ಠಾಣಾ ಇನ್ಸ್ ಪೆಕ್ಟರ್ ಅಜಯ್ ಸಾರಥಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಸಂಪರ್ಕಕ್ಕಾಗಿ: 08136-245666,9480802977,9480802941
ವರದಿ: ನಂದೀಶ್ ನಾಯ್ಕ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1