ಸುಪ್ರೀಂ ಕೋರ್ಟ್‌ಗೆ 5 ಹೊಸ ನ್ಯಾಯಾಧೀಶರ ನೇಮಕಕ್ಕೆ ಕೇಂದ್ರ ಸರ್ಕಾರ ಅನುಮೋದನೆ ನೀಡಿದೆ ಕೊಲಿಜಿಯಂ ಶಿಫಾರಸು ಮಾಡಿದ ಎಲ್ಲ 5 ಮಂದಿಯ ನೇಮಕಕ್ಕೆ ಕೇಂದ್ರ ಅನುಮತಿ ನೀಡಿದೆ. ಅನುಮೋದನೆ ವಿಳಂಬಕ್ಕೆ ಸುಪ್ರೀಂ ಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.
ಇದಾದ ಬಳಿಕ ಕೇಂದ್ರ ಸರ್ಕಾರ ನೇಮಕಾತಿಗೆ ಅನುಮತಿ ನೀಡಿತ್ತು. ಕೊಲಿಜಿಯಂ ನೀಡಿರುವ ಶಿಫಾರಸುಗಳನ್ನು ಕೇಂದ್ರ ಸರ್ಕಾರ ಶೀಘ್ರವೇ ಅಂಗೀಕರಿಸಲಿದೆ ಎಂದು ಅಟಾರ್ನಿ ಜನರಲ್ ಆರ್ ವೆಂಕಟರಮಣಿ ಅವರು ಸುಪ್ರೀಂ ಕೋರ್ಟ್‌ಗೆ ತಿಳಿಸಿದ ಬೆನ್ನಲ್ಲೇ ನೇಮಕಾತಿಗಳಿಗೆ ಅನುಮೋದನೆ ದೊರೆತಿದೆ.
ನೇಮಕಾತಿ ಆದೇಶಕ್ಕೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ ಎಂದು ತಿಳಿದುಬಂದಿದೆ. ರಾಜಸ್ಥಾನ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಂಕಜ್ ಮಿತ್ತಲ್, ಪಾಟ್ನಾ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಸಂಜಯ್ ಕರೋಲ್, ಮಣಿಪುರ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಪಿವಿ ಸಂಜಯ್ ಕುಮಾರ್, ಪಾಟ್ನಾ ಹೈಕೋರ್ಟ್ ನ್ಯಾಯಾಧೀಶ ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ಮನೋಜ್ ಮಿಶ್ರಾ ಅವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ನೇಮಿಸಲಾಗಿದೆ.
ಇದರೊಂದಿಗೆ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ಸಂಖ್ಯೆ 32ಕ್ಕೆ ಏರಿಕೆಯಾಗಲಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ನೇತೃತ್ವದ ಕೊಲಿಜಿಯಂ ಡಿಸೆಂಬರ್ 13 ರಂದು ಕಾನೂನು ಸಚಿವಾಲಯಕ್ಕೆ ಐವರನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾಗಿ ಬಡ್ತಿ ನೀಡಬೇಕು ಎಂದು ಶಿಫಾರಸು ಮಾಡಿತ್ತು. ಆದರೆ, ಎರಡು ತಿಂಗಳು ಕಳೆದರೂ ಸರ್ಕಾರ ಯಾವುದೇ ನಿರ್ಧಾರ ಕೈಗೊಂಡಿಲ್ಲ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


