ತಮಿಳುನಾಡು: ಉಚಿತ ಸೀರೆಗಾಗಿ ಮಹಿಳೆಯರು ಮುಗಿಬಿದ್ದ ಪರಿಣಾಮ ಕಾಲ್ತುಳಿತದಲ್ಲಿ ನಾಲ್ವರು ಮಹಿಳೆಯರು ಸಾವನ್ನಪ್ಪಿದ್ದಾರೆ.
ತಿರುಪತ್ತೂರಿನ ವಾಣಿಯಂಪಾಡಿಯಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ 12 ಮಂದಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಖಾಸಗಿ ಸಂಸ್ಥೆಯೊಂದು ಉಚಿತವಾಗಿ ಸೀರೆ, ನೀಡುವುದಾಗಿ ಘೋಷಿಸಿದ್ದು, ಇದಕ್ಕಾಗಿ ಕಂಪನಿಯವರು ಹೇಳಿದ ಜಾಗಕ್ಕೆ ಜನ ಹೆಚ್ಚಿನ ಸಂಖ್ಯೆಯಲ್ಲಿ ಬಂದಿದ್ದರು. ಸಾವಿರಾರು ಜನರು ಜಮಾಯಿಸುತ್ತಿದ್ದಂತೆ, ಕಾಲ್ತುಳಿತ ಸಂಭವಿಸಿದೆ.
ಅಯ್ಯಪ್ಪನ್ ಎಂಬ ವ್ಯಕ್ತಿ ತೈಪುಯಂ ಹಬ್ಬದ ಆಚರಣೆಯ ಅಂಗವಾಗಿ ಉಚಿತ ಸೀರೆ ಮತ್ತು ಉಡುಪುಗಳನ್ನು ವಿತರಿಸಿದರು. ಇದಕ್ಕೆ ಟೋಕನ್ ನೀಡುವಾಗ ಅವಘಡ ಸಂಭವಿಸಿದೆ. 100ಕ್ಕೂ ಹೆಚ್ಚು ಮಹಿಳೆಯರು ಬಟ್ಟೆ ಖರೀದಿಸಲು ಬಂದಿದ್ದರು ಎಂದು ಪೊಲೀಸರು ಮಾಹಿತಿ ನೀಡಿದರು. ಅನೇಕ ಜನರು ಗಾಯಗೊಂಡರು. ಘಟನೆಯ ಕುರಿತು ಹೆಚ್ಚಿನ ತನಿಖೆ ನಡೆಯುತ್ತಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


