ಬೀದರ್: ಜಿಲ್ಲೆಯ ಔರಾದ್ ‘ಬಿ’ ಪಟ್ಟಣದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರನ್ನು ಪಕ್ಷದ ಟಿಕೆಟ್ ಆಕಾಂಕ್ಷಿಗಳು ಭವ್ಯವಾಗಿ ಸ್ವಾಗತ ಮಾಡಿದರು.
ಇದೇ ವೇಳೆ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಸಿದ್ದರಾಮಯ್ಯ, ಕರ್ನಾಟಕ ರಾಜ್ಯದಲ್ಲಿ ಬಿಜೆಪಿ ಸರ್ಕಾರ ದುರಾಡಳಿತದ ವಿರುದ್ಧ ಕಿಡಿಕಾರಿದ ಅವರು, ಔರಾದ್ ಕ್ಷೇತ್ರದ ಪಶು ಸಂಗೋಪನೆ ಸಚಿವರಾದ ಪ್ರಭು ಚೌಹಾಣರ ವಿರುದ್ಧ ವಾಗ್ದಾಳಿ ನಡೆಸಿದರು. ದುರಾಡಳಿತ ಮಾಡುತ್ತಿರುವ ಬಿಜೆಪಿಯನ್ನು ಕಿತ್ತೊಗೆದು ಕಾಂಗ್ರೆಸ್ ನ್ನು ಅಧಿಕಾರಕ್ಕೆ ತರುವಂತೆ ಅವರು ಮನವಿ ಮಾಡಿಕೊಂಡರು.
ಕಾಂಗ್ರೆಸ್ ಸರ್ಕಾರ ಕರ್ನಾಟಕ ರಾಜ್ಯದ ತರುವ ನಿಟ್ಟಿನಲ್ಲಿ ಪ್ರಜಾ ಧ್ವನಿ ಯಾತ್ರೆಯನ್ನು ಇಡೀ ಕರ್ನಾಟಕ ರಾಜ್ಯದಲ್ಲಿ ಹಮ್ಮಿಕೊಂಡಿದ್ದೇವೆ ಎಂದು ಸಿದ್ದರಾಮಯ್ಯ ಇದೇ ವೇಳೆ ತಿಳಿಸಿದರು.
ಈ ವೇಳೆ ಕೆಪಿಸಿಸಿ ಕಾರ್ಯಧ್ಯಕ್ಷರಾದ ಈಶ್ವರ್ ಬಿ ಖಂಡ್ರೆ ಮಾತನಾಡಿ, ಔರಾದ್ ಕ್ಷೇತ್ರದ ಜನರು ಕಾಂಗ್ರೆಸ್ ಮೇಲೆ ಇಟ್ಟಿರುವ ಅಭಿಮಾನಕ್ಕೆ ಅಭಿನಂದಿಸುವುದಾಗಿ ತಿಳಿಸಿದರು.
ಕೆಪಿಸಿಸಿ ಕಾರ್ಯದರ್ಶಿಗಳಾದ ಮೀನಾಕ್ಷಿ ಸಂಗ್ರಾಮ, ಭೀಮಸೇನ್ ರಾವ್ ಶಿಂಧೆ, ಲಕ್ಷ್ಮಣ ಸೋರಲ್ಕರ್, ಸುಧಾಕರ್ ಕೊಳ್ಳುರ್, ರಾಮಣ ಒಡಿಯರ್, ಬಂಟಿ ದರ್ಬಾರೆ, ಹಾಗೂ ಬೀದರ್ ಜಿಲ್ಲೆಯ ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಮತ್ತು ಹಲವಾರು ಕಾಂಗ್ರೆಸ್ ಹಿರಿಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು.
ವರದಿ: ಅರವಿಂದ್ ಮಲ್ಲಿಗೆ, ಬೀದರ್
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/EKLI3M1veVt0cQ8xLKb9B1


